ಆತ್ಮಹತ್ಯೆ ಪ್ರಕರಣ: ಹುಟ್ಟೂರಿನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ
e-ಸುದ್ದಿ, (ಬಡಸ) ಬೆಳಗಾವಿ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರವೇರಿತು.
ಮನೆ ಎದುರು ಸಂತೋಷ್ ಮೃತದೇಹವನ್ನು ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಇದೇ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಅನೇಕರು ಮೃತದೇಹದ ಅಂತಿಮ ದರ್ಶನ ಪಡೆದರು.
ಉಡುಪಿಯಿಂದ ಸಂತೋಷ್ ಮೃತದೇಹವನ್ನು ಬುಧವಾರ ರಾತ್ರಿಯೇ ಪೊಲೀಸ್ ಬಂದೋಬಸ್ತ್‌ನಲ್ಲಿ ಸಾಗಿಸಲಾಯಿತು.
ಅಂತ್ಯಕ್ರಿಯೆ ವೇಳೆ ಸಂತೋಷ್ ಪಾಟೀಲ್ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸ್ಥಳೀಯ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಥವಾ ಬಿಜೆಪಿ ನಾಯಕರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದರು. ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.