e-ಸುದ್ದಿ, ಮಸ್ಕಿ
ಆರ್,ಬಸನಗೌಡ ತುರ್ವಿಹಾಳ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಬಹುದಿನಗಳಿಂದ ರಾಜಕೀಯ ವಲಯದಲ್ಲಿ ಚರ್ಚೆಗೆ ಶನಿವಾರ ಪೂರ್ಣ ವಿರಾಮ ಬಿದಿದ್ದೆ. ಬಸನಗೌಡ ತುರ್ವಿಹಾಳÀ ಬೆಂಬಲಿಗರು ಬಹುದಿನಗಳಿಂದ ಕಾಂಗ್ರೆಸ್ ಸೇರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ ಹಾಕುತ್ತಿದ್ದುದು ಈಗ ಸತ್ಯವಾಗಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ನಿವಾಸದಲ್ಲಿ ಆರ್.ಬಸನಗೌಡ ತುರ್ವಿಹಾಳ ಮತ್ತು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಜಿಲ್ಲಾ ಮತ್ತು ಮಸ್ಕಿ ಬ್ಲಾಕ್ ಅಧ್ಯಕ್ಷರು ಸಂಜೆ 8 ಗಂಟೆ ಸಭೆ ನಡೆಸುವ ಮೂಲಕ ಅಂತಿಮ ಮಾತುಕತೆ ನಡೆಸಿದರು.
ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾ ಕಾಂಗ್ರೆಸ ಅಧ್ಯಕ್ಷರು ಬಸನಗೌಡ ತುರ್ವಿಹಾಳ ಅವರನ್ನು ಪಕ್ಷಕ್ಕೆ ಸೇರಿಸಲು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಗ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ ಅವರು ಬಸನಗೌಡ ತುರ್ವಿಹಾಳ ಹಾಗೂ ಅವರ ಸಹೋದರ ಸಿದ್ದನಗೌಡ ತುರ್ವಿಹಾಳ ಮತ್ತು ಮಸ್ಕಿ ತಾ.ಪಂ.ಅಧ್ಯಕ್ಷ ಶಿವಣ್ಣ ನಾಯಕ ಅವರಿಗೆ ಡಿಕೆ ಶಿವಕುಮಾರ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.
ಶನಿವಾರ ಬೆಳಿಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ. ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಎನ್.ಎಸ್.ಬೋಸರಾಜ ಶಾಸಕರಾದ ಬಸನಗೌಡ ದದ್ದಲ್, ಡಿಎಸ್.ಹೂಲಗೇರಿ ಹಾಗೂ ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪುರ ನಿಯೋಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಭೆ ನಡೆಸಿ ಬಸನಗೌಡ ತುರ್ವಿಹಾಳ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವ ಕುರಿತು ಸುದಿರ್ಘವಾಗಿ ಚರ್ಚಿಸಿದರು.
ಜಿಲ್ಲೆಯ ಮುಖಂಡರು ಒಗ್ಗಟ್ಟಾಗಿ ಚುನಾವಣೆ ಎದುರಿಸಿದರೆ ಈ ಬಾರಿ ಮಸ್ಕಿ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ವಶಕ್ಕೆ ಪಡೆಯುವುದು ಕಷ್ಟವಲ್ಲ. ಆದರೆ ಮೊದಲು ಜಿಲ್ಲಾ ಮುಖಂಡರು ಒಗ್ಗಟ್ಟಾಗಿ ಎಂದು ಸಿದ್ಧರಾಮಯ್ಯ ಸ್ಪಸ್ಟ ಪಡಿಸಿದ್ದಾರೆಂದು ವಿಶ್ವಾಸನೀಯ ಮೂಲಗಳು ದೃಡಪಡಿಸಿವೆ.