2-3 ದಿನದಲ್ಲಿ ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ
e-ಸುದ್ದಿ ನ್ಯೂಸ್ ಡೆಸ್ಕ್
ನವದೆಹಲಿ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಭೇಟಿಯ ನಂತರ ಮಧ್ಯಮಗಳ ಜೊತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿದ್ದು, ಜೆಪಿ ನಡ್ಡಾ ಅವರ ಜೊತೆಗೂ ಮಾತನಾಡುತ್ತೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ ಎಂದು ಹೇಳಿದರು.
ನಾನು ಯಾವುದೇ ಹೆಸರುಗಳನ್ನು ಅಮಿತ್ ಶಾ ಅವರಿಗೆ ಹೇಳಿಲ್ಲ. ಮುಂದಿನ ವಾರ ಬಹಳ ಮುಖ್ಯವಾಗಿದೆ. ಯಾಕೆಂದರೆ ಸ್ಥಳೀಯ ಚುನಾವಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದು ಮಾಹಿತಿ ನೀಡಿದರು.