ರಸಗೊಬ್ಬರ ಮತ್ತು ಬಿತ್ತನೆ ಬೀಜ ಪೂರೈಕೆಗೆ ಅಗತ್ಯ ಕ್ರಮ – ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ

ರಸಗೊಬ್ಬರ ಮತ್ತು ಬಿತ್ತನೆ ಬೀಜ ಪೂರೈಕೆಗೆ ಅಗತ್ಯ ಕ್ರಮ – ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ

ವರದಿ ವೀರೇಶ ಅಂಗಡಿ ಗೌಡೂರು

e-ಸುದ್ದಿ ಲಿಂಗಸುಗೂರು

ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆಗಾಗಿ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಕೃಷಿ ಇಲಾಖೆಯಿಂದ ರಿಯಾಯ್ತಿ ದರದಲ್ಲಿ ವಿತರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

ಅವರು ಸೋಮವಾರದಂದು ಲಿಂಗಸುಗೂರಿನ ಮಿನಿ ವಿಧಾನಸೌಧದಲ್ಲಿ ಮಸ್ಕಿ ಮತ್ತು ಲಿಂಗಸುಗೂರು ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪದಡಿಯಲ್ಲಿ ಸಾವನ್ನಪಿದ ಕುರಿಗಳಿಗೆ ಹಾಗೂ ಬೆಳೆ ಹಾನಿಯಾದ ರೈತರಿಗೆ ಪರಿಹಾರ ವಿತರಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಗಾರುಪೂರ್ವ ಮಳೆಗೆ ಹಲವೆಡೆ ದನಕರು ಕುರಿ ಮೇಕೆಗಳು ಸಿಡಿಲು ಬಡಿದು ಸಾವನ್ನಪ್ಪಿವೆ. ಜಾನುವಾರುಗಳ ಮಾಲೀಕರಿಗೆ ಸರ್ಕಾರದಿಂದ ಪ್ರಕೃತಿ ವಿಕೋಪದಲ್ಲಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮಳೆಯಿಂದ ಹಾನಿಯಾದ ಮನೆಗಳನ್ನು ಮೂರು ಹಂತಗಳಲ್ಲಿ ವರ್ಗೀಕರಣ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಾದ್ಯಂತ ಈಗಾಗಲೇ ಮನೆಗಳ ಹಾನಿಯ ಸಮೀಕ್ಷೆ ಕಾರ್ಯ ನಡೆದಿದೆ ಎಂದು ಹೇಳಿದರು.

ತಾಲೂಕಿನ ಬನ್ನಿಗೋಳ ಗ್ರಾಮದಲ್ಲಿ ಸಿಡಿಲಿಗೆ ಮೃತಪಟ್ಟ ರಾಮಪ್ಪ ನವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಹಾಗೂ ಮಸ್ಕಿಯ 8 ಜನ ಫಲಾನುಭವಿಗಳ ಪರಿಹಾರದ ಚಕ್ಕನ್ನು ವಿತರಣೆ ಮಾಡಿದರು.

ತಾಲೂಕಿನ ನಡುಗಡ್ಡೆ ಪ್ರದೇಶಗಳ ಜನರು ತೊಂದರೆ ಅನುಭವಿಸುತ್ತಿದ್ದು ಅವರಿಗೆ ಶಾಶ್ವತವಾಗಿ ಪರಿಹಾರ ‌ಮತ್ತು ಮೂಲ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಸರಕಾರದ ವಿವಿಧ ಯೋಜನೆಗಳಡಿಯಲ್ಲಿ ಬದುಕು ಕಟ್ಟಿಕೊಳ್ಳಲು ಸೌಲಭ್ಯಗಳನ್ನು ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಯಚೂರು ಸಂಸದರಾದ ರಾಜ ಅಮರೇಶ್ವರ ನಾಯಕ್, ಶಾಸಕ ಡಿ ಎಸ್ ಹೂಲಗೇರಿ , ಮಸ್ಕಿ ಶಾಸಕ ಆರ್ .ಬಸನಗೌಡ ತುರುವಿಹಾಳ ,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಡಾ ಶಿವಬಸಪ್ಪ ಹೆಸರೂರು, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಸಹಾಯಕ ಆಯುಕ್ತರಾದ ರಾಹುಲ್ ಸಂಕನೂರ, ತಹಶೀಲ್ದಾರ್ ಬಲರಾಮ ಕಟ್ಟಿಮನಿ,ಮಸ್ಕಿ ತಹಶೀಲ್ದಾರ್ ಆರ್ ಕವಿತಾ, ಸೆರಿದಂತೆ ತಾಲೂಕಿನ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Don`t copy text!