e- ಸುದ್ದಿ ಮಸ್ಕಿ
ಧರ್ಮಸ್ಥಳ ಗ್ರಾಮೀಣಾಭೀವೃದ್ದಿ ಸಂಸ್ಥೆಯವರು ವಿದ್ಯಾರ್ಥಿಗಳಿಗಾಗಿ ಉತ್ತಮವಾದ ಜ್ಞಾನತಾಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದು ಪ್ರತಿಯೊಬ್ಬರಿಗೂ ಮುಟ್ಟಬೇಕು ಎಂದು ಬಿಜೆಪಿಯ ಯುವ ಮುಖಂಡ ಪ್ರಸನ್ನ ಪಾಟೀಲ ಹೇಳಿದರು.
ಪಟ್ಟಣದ ಗಚ್ಚಿನಮಠದಲ್ಲಿ ಧಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯವರು ಬುಧವಾರ ಆಯೋಜಿಸಿದ್ದ ಜ್ಞಾನತಾಣ ಕಾರ್ಯಕ್ರಮ ಉದ್ಘಟಿಸಿ ಮಾತನಾಡಿದರು. ಕರೊನಾ ಹಿನ್ನಲೆಯಲ್ಲಿ ಮಕ್ಕಳಿಗೆ ಮನೆಯಲ್ಲಿ ಕುಳಿತು ಅಬ್ಯಾಸ ಮಾಡಲು ಬೇಕಾದ ಟ್ಯಾಬ್‍ಗಳನ್ನು ವಿತರಿಸುತ್ತಿರುವದು ಪ್ರಶಂಶನೀಯ ಎಂದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಯೋಜಾನಾಧಿಕಾರಿ ಹನುಮಂತಪ್ಪ ಮಾತನಾಡಿ ಕಡಿಮೆ ದರದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ಕೊಡಲಾಗುತ್ತದೆ ಎಂದು ತಿಳಿಸಿದರು.
ಗ್ರಾಮದ ಹಿರಿಯ ಮುಖಂಡ ಮಹಾದೇವಪ್ಪಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಬಸನಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಮುಖ್ಯಗುರು ಬಸಪ್ಪ ತನಿಖೆದಾರ, ಉಪನ್ಯಾಸಕ ರಾಮಣ್ಣ ಹಂಪರಗುಂದಿ ಇದ್ದರು.