ಬಿಜೆಪಿ ಪಕ್ಷ ಸೇರ್ಪಡೆಯಾದ ಜೆಡಿಎಸ್, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು
e-ಸುದ್ದಿ ಲಿಂಗಸುಗೂರು
ಲಿಂಗಸುಗೂರು ಪಟ್ಟಣದ ವಿಜಯ ಮಹಾಂತೇಶ್ವರ ಶಾಖಾ ಮಠದಲ್ಲಿ ರವಿವಾರ ಹಮ್ಮಿಕೊಂಡಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಮಾನಪ್ಪ ವಜ್ಜಲ್ ಹಾಗೂ ಇತರ ಗಣ್ಯರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಲಿಂಗಸುಗೂರು ತಾಲೂಕಿನ ಜೆಡಿಎಸ್ ಪಕ್ಷದ ಮಾಜಿ ಅಧ್ಯಕ್ಷ ಕೆ. ನಾಗಭೂಷಣ ಹಾಗೂ ಅವರ ಅಪಾರ ಬೆಂಬಲಿಗರು ಮತ್ತು ಮುದಗಲ್, ಹಟ್ಟಿಚಿನ್ನದಗಣಿ ಪಟ್ಟಣದ ಯುವಕರು ಮಾಜಿ ಶಾಸಕ ಹಾಗೂ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಮಾನಪ್ಪ ವಜ್ಜಲ್ ಅವರು ಈ ದೇಶದ ಪ್ರಧಾನಮಂತ್ರಿಯವರು ದೇಶಕ್ಕಾಗಿ ಹಗಲು ಇರುಳು ಸೇವೆ ಮಾಡುವಲ್ಲಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಬಡವ, ಹಿಂದುಳಿದ,ದಿನ ದಲಿತರ ರೈತ ವರ್ಗದವರ ಪರವಾಗಿ ಕೇಂದ್ರದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸರಿಯಾಗಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜೆಡಿಎಸ್ ಪಕ್ಷವು ಕುಟುಂಬ ರಾಜಕಾರಣವನ್ನು ಮಾಡುತ್ತಿವೆ ಇದರಿಂದ ಬೇಸತ್ತ ಲಿಂಗಸುಗೂರಿನ ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ನಾಗಭೂಷಣ್ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಯುವಕರಿಗೆ ದಾರಿತಪ್ಪಿಸುವ ಕಾರ್ಯ ಮಾಡುತ್ತಿದೆ ಜನರಿಗೆ ತಪ್ಪು ದಾರಿತೋರಿಸುವ ಪಕ್ಷ ಕಾಂಗ್ರೆಸ್ ಎಂದು ಆರೋಪಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140-150 ಸೀಟು ಗೆಲ್ಲುವ ಮೂಲಕ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಡಾ ಶಿವಬಸಪ್ಪ ಹೆಸರೂರು ಮಾತನಾಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡಿರುವ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾನಪ್ಪ ವಜ್ಜಲ್ ಅವರನ್ನು 30-40 ಸಾವಿರ ಮತಗಳ ಅಂತರದಿಂದ ಜಯಶಿಲರನ್ನಾಗಿ ಮಾಡೋಣ . ಬಿಜೆಪಿ ಪಕ್ಷಕ್ಕೆ ಅವರು ಬೆಂಬಲ ತುಂಬಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜಾ ಶ್ರೀನಿವಾಸ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ, ಟಿ, ಆರ್, ನಾಯ್ಕ್, ಪುರಸಭೆ ಅಧ್ಯಕ್ಷೆ ಸುನೀತಾ ಕೆಂಬಾವಿ, ಗೋವಿಂದ ನಾಯಕ, ಜಯಶ್ರೀ ಸಕ್ರಿ ಸೇರಿದಂತೆ ನೂರಾರು ಭಾರತೀಯ ಜನತಾ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು .