e-ಸುದ್ದಿ ಮಸ್ಕಿ
ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಪಕ್ಷ ಕೊಟ್ಟ ಹಲವು ಜವಬ್ದಾರಿಗಳನ್ನು ನಿಭಾಯಿಸಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಬಿಜೆಪಿಗೆ ಸೇರಿದ ನಂತರ ಮೂಲ ಬಿಜೆಪಿ ಕಾರ್ಯಕರ್ತರನ್ನು ಮೂಲೆಗುಂಪು ಮಾಡುತ್ತಿರುವುದರಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಕೃಷ್ಣ.ಡಿ.ಚಿಗರಿ ತಿಳಿಸಿದ್ದಾರೆ.
ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಸಂಘಟನೆಗಾಗಿ ಪಕ್ಷ ಕೊಟ್ಟಿದ್ದ ನಗರ ಘಟಕ ಕಾರ್ಯದರ್ಶಿ ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೇರಿದಂತೆ ವಿವಿಧ ಜವಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿ ಪಕ್ಷ ಸಂಘಟನೆಯ ಕೆಲಸ ಮಾಡಿದ್ದೇನೆ. ಇತ್ತಿಚಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಸಕ್ರಿಯವಾಗಿ ಪಕ್ಷದ ಅಭ್ಯರ್ಥಿಯ ಪರ ಮತಯಾಚನೆ ಮಾಡಿದ್ದೇನೆ. ಆದರೆ ಪಕ್ಷದ ನಿಷ್ಟಾವಂತ ಮೂಲ ಕಾರ್ಯಕರ್ತರನ್ನು ಮೂಲೆಗುಂಪು ಮಾಡುವ ಹುನ್ನಾರ ನಡೆದಿದೆ. ಆದ್ದರಿಂದ ಮುಖಂಡರ ನಿರ್ಲಕ್ಷ ಧೋರಣೆಗೆ ಬೇಸತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.