e-ಸುದ್ದಿ, ಮಸ್ಕಿ
ತಾಲೂಕಿನ ಮೆದಕಿನಾಳ ಗ್ರಾಮದಲ್ಲಿ ಗುರುವಾರ ಸರ್ಕಾರಿ ಪ್ರೌಢಶಾಲೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಆಚರಿಸಿದರು.
ಮುಖ್ಯಗುರು ಬಸಪ್ಪ ಮುಳ್ಳುರು ಭಾವೈಕ್ಯತೆ ಕುರಿತು ಮಾತನಾಡಿದರು. ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ರಾಜೇಶ್ವರಿ ಮತ್ತು ಶ್ರೀನಿವಾಸ ಇಲಾಖೆಯ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.
ಎಸ್.ಡಿ.ಎಂಸಿ. ಅಧ್ಯಕ್ಷ ರಾಜಣ್ಣ ಪರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಕೊಟ್ರೇಶ, ಅನ್ನಪೂರ್ಣ, ಆಲಪ್ಪ ನಾಯ್ಕ್, ಗುಂಡುರಾವ್ ದೇಸಾಯಿ ಇದ್ದರು.