ಅಂಬೇಡ್ಕರ್ ಸೇವಾ ಸಮಿತಿಯ ಉಚಿತ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದ ಶಾಸಕ ದೊಡ್ಡನಗೌಡ ಜಿ ಪಾಟೀಲ್..
e-ಸುದ್ದಿ ಇಳಕಲ್
ಇಳಕಲ್ ನಗರದಲ್ಲಿ ಪ್ರತಿ ವರ್ಷ ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಆಯೋಜಿಸುವ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಬಂತೆಜೀ ಮಹಾರಾಜ್ ಸಮಾಜದ ಹಿರಿಯರಾದ ಸಿದ್ದಣ್ಣ ಆಮದಿಹಾಳ, ನಗರಸಭೆ ಅಧ್ಯಕ್ಷ ಲಕ್ಷ್ಮಣ ಗುರಂ ಮಾಜಿ ಅಧ್ಯಕ್ಷರಾದ ಶ್ರೀಮತಿ ಶೋಭಾ ಆಮದಿಹಾಳ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಮಹಾಂತಗೌಡ ಪಾಟೀಲ್ ಹಾಗೂ ಸಮಾಜದ ಹಿರಿಯರು ಯುವಕರು ತಾಯಂದಿರು ನೂತನ ವಧುವರರು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ