ಮದುವಣಗಿತ್ತಿಯಂತೆ ಶೃಂಗಾರಗೊಂಡು ಉದ್ಘಾಟನೆಗೆ ಸಿದ್ದಗೊಂಡ ಉದ್ಯಾನವನ.
e-ಸುದ್ದಿ ಲಿಂಗಸುಗೂರು
ಲಿಂಗಸುಗೂರು ತಾಲ್ಲೂಕಿನ ಕರಡಕಲ್ ಕೆರೆಯ ದಂಡೆಯ ಮೇಲೆ ನಿರ್ಮಾಣ ಮಾಡಲಾದ ಸಾರ್ವಜನಿಕ ಉದ್ಯಾನವನವು ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ಮುಖ್ಯ ದ್ವಾರದ ಮುಂಭಾಗದಲ್ಲಿ ತಾಲೂಕಿನ ಐತಿಹಾಸಿಕ ಪ್ರೆಕ್ಷೆಣಿಯ ಸ್ಥಳಗಳ ಚಿತ್ರಗಳನ್ನು ಬಿಡಿಸಲಾಗಿದ್ದು ನೋಡುಗರ ಕಣ್ಮನ ಸೆಳೆಯುತ್ತಿವೆ.
ಉದ್ಘಾಟನೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು ಇದರ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಡಿ.ಎಸ್.ಹುಲಿಗೇರಿ ಹೇಳಿದರು.
ಸಂಜೆ 5 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿದ್ದು
ಗಂಗಾವತಿ ಪ್ರಾಣೇಶ್ ರವರ ಹಾಸ್ಯ ತಂಡದಿಂದ ವಿಶೇಷ ಹಾಸ್ಯ ಕಾರ್ಯಕ್ರಮ ಮತ್ತು ಸ್ಥಳಿಯ ಲಕ್ಷ್ಮಿ ನಾರಾಯಣ ಮೆಲೋಡಿಸ್ ಅವರ ತಂಡದಿಂದ ಸಂಗೀತ ಕಾರ್ಯಕ್ರಮಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ವರದಿ – ವೀರೇಶ ಅಂಗಡಿ ಗೌಡುರು