ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಲಿಂಗಸುಗೂರಿನ ಆದರ್ಶ ವಿದ್ಯಾಲಯ( R.M.S.A) ಶಾಲೆಗೆ 2023 24 ನೇ ಸಾಲಿನ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ದಿನಾಂಕ 18-02-2023 ರಿಂದ 4-03-2023 ರವರಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಬಹುದಾಗಿದೆ.
www.schooleducation.kar.nic.in ಹಾಗೂ www.vidyavahini.karnataka.gov.in ವೆಬ್ಸೈಟಿಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
1) ವಿದ್ಯಾರ್ಥಿಯ ಎಸ್ ಎ ಟಿ ಎಸ್ ಸಂಖ್ಯೆ
2) ವಿದ್ಯಾರ್ಥಿಯ ಇತ್ತೀಚಿನ ಬಣ್ಣದ ಅಳತೆಯ ಒಂದು ಭಾವಚಿತ್ರ
3) ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಅದರ ಆರ್ .ಡಿ ಸಂಖ್ಯೆ
4) ವಿಶೇಷ ಚೇತನ (CWSN) ವಿದ್ಯಾರ್ಥಿಯಾಗಿದ್ದಲ್ಲಿ ಸಂಬಂಧಿಸಿದ ಪ್ರಾಧಿಕಾರದಿಂದ ಪಡೆಯಲಾದ ಪ್ರಮಾಣ ಪತ್ರ
5) ಪಾಲಕರ ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಬೇಕು.
ಆಯ್ಕೆಯ ಪ್ರವೇಶ ಪರೀಕ್ಷೆಯು ದಿನಾಂಕ 26.03.2023 ರಂದು ನಡೆಯುತ್ತದೆ. ಹೆಚ್ಚಿನ ಮಾಹಿತಿಗಾಗಿ ಲಿಂಗಸುಗೂರಿನ ಸರ್ಕಾರಿ ಆದರ್ಶ ವಿದ್ಯಾಲಯ ಮುಖ್ಯೋಪಾಧ್ಯಾಯರಾದ ಶ್ರೀ ಡಿ.ಎಂ.ದೇಸಾಯಿ ಅವರನ್ನು ಸಂಪರ್ಕಿಸಬಹುದು.
ದೂರವಾಣಿ ಸಂಖ್ಯೆಗಳು-
8310027548 8151804314
9739159932
9535094854
ಈ ಮೇಲೆ ನೀಡಿರುವ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.