ಯಾದಗಿರಿ ಜಿಲ್ಲೆಯ ಪತ್ರಕರ್ತರ ಸಂಘ’ಕ್ಕೆ ಉತ್ತಮ ಸಂಘವು ಎಂಬ ಪ್ರಶಸ್ತಿ.
‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ವತಿಯಿಂದ 2021-22ನೇ ಸಾಲಿನ ರಾಜ್ಯದಲ್ಲೇ ‘ಉತ್ತಮ ಜಿಲ್ಲಾ ಸಂಘ’ ಪ್ರಶಸ್ತಿಯನ್ನು ‘ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ಕ್ಕೆ ನೀಡಿ ಗೌರವಿಸಲಾಯಿತು..!
ಸಾಂಘಿಕ ಚಟುವಟಿಕೆಗಳ ಮೂಲಕ ಕ್ರಿಯಾಶೀಲರಾಗಿ ಕೆಲಸ ಮಾಡುವ ಜಿಲ್ಲಾ ಸಂಘಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ‘ಉತ್ತಮ ಜಿಲ್ಲಾ ಸಂಘ ಪ್ರಶಸ್ತಿ’ಯನ್ನು ವಿಜಯಪುರದಲ್ಲಿ ನಡೆದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಲಾಯಿತು..!
ಸಂಘದ ಜಿಲ್ಲಾಧ್ಯಕ್ಷರಾದ ಮಲ್ಲಪ್ಪ ಸಂಕೀನ್, ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಕಾಮನಟಗಿ ಮತ್ತು ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ ಹತ್ತಿಕುಣಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್.ವಿ.ಸಿ. ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ. ಪಾಟೀಲ, ಶಾಸಕ ಶಿವಾನಂದ ಪಾಟೀಲ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಪ್ರಕಾಶ ರಾಠೋಡ್, ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸನ್ಮಾನಿಸಿ ಪ್ರಶಸ್ತಿ ವಿತರಿಸಿದರು..!
ಕಳೆದ 13 ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರಶಸ್ತಿಯು ಲಭಿಸಿದೆ..!
ಇದಲ್ಲದೇ ಅತ್ಯುತ್ತಮ ತನಿಖಾ ವರದಿಗಾಗಿ ಪತ್ರಕರ್ತರಾದ ಆನಂದ ಸೌದಿ ಮತ್ತು ಪತ್ರಕರ್ತರಾದ ಅಶೋಕ ಸಾಲವಡಗಿ ಅವರಿಗೆ ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿಯನ್ನು (ಆರ್ಥಿಕ ದುರ್ಬಲ ವರ್ಗದ ಅತ್ಯುತ್ತಮ ವರದಿಗೆ) ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು..!
-ಕೆ.ಶಿವು.ಲಕ್ಕಣ್ಣವರ