ಮುದೇನೂರ ಗ್ರಾಮದಲ್ಲಿ ಆರೋಗ್ಯ ಅಮೃತ ಅಭಿಯಾನ..
e-ಸುದ್ದಿ ವರದಿ:ಮುದೇನೂರ
ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಆರೋಗ್ಯ ಅಮೃತ ಅಭಿಯಾನ ಹಮ್ಮಿಕೊಳ್ಳಲಾಯಿತು. ಮುದೇನೂರಿನ ಗ್ರಾಮ ಪಂಚಾಯಿತಿ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಆರೋಗ್ಯ ಇಲಾಖೆಯ ಅಧಿಕಾರಿ ಚಿದಂಬರ್ ಜೋಶಿ ಮಾತನಾಡಿ ಆರೋಗ್ಯದ ಕುರಿತು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರಿಗೂ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೂ ಮತ್ತು ಅಂಗನವಾಡಿ ಕಾರ್ಯಕರ್ತರಿಗೂ ಮತ್ತು ಆಶಾ ಕಾರ್ಯಕರ್ತರಿಗೂ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ದಸ್ತಗಿರಿ ಸಾಬ್ ಬಡಿಗೇರ್, ಗ್ರಾಮ ಪಂಚಾಯತ್ ಸದಸ್ಯ ಹುಸೇನಪ್ಪ ಹಿರೇಮನಿ ಶರಣಗೌಡ ಕೂಡ್ಲೂರು, ಗೀತಾ ಕುಷ್ಟಗಿ ,ಸಂಗಪ್ಪ ವಾಲಿಕಾರ್, ಆರೋಗ್ಯ ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು
ವರದಿಗಾರರು: ಶರಣಗೌಡ ಕಂದಕೂರ