ಗೌಡೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ವಿಶೇಷ ಪೂಜೆ ಹಾಗೂ ಭಜನೆ ಕಾರ್ಯಕ್ರಮ
e-ಸುದ್ದಿ ಲಿಂಗಸುಗೂರು
ಲಿಂಗಸುಗೂರು ತಾಲ್ಲೂಕಿನ ಗೌಡೂರು ಗ್ರಾಮದ ಆರಾಧ್ಯ ದೈವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ವೀರಭದ್ರೇಶ್ವರ ದೇವರಿಗೆ ಮಹಾರುದ್ರಾಭಿಷೆಕ, ಬಿಲ್ವಾರ್ಚನೆ, ಪುಷ್ಪಾಲಂಕಾರ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.
ಮುಂಜಾನೆಯಿಂದ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಶ್ರೀ ವೀರಭದ್ರೇಶ್ವರ ದೇವರಿಗೆ ತನು ಮನದಿಂದ ಭಕ್ತಿ ಪೂರ್ವಕವಾಗಿ ನಮಸ್ಕರಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವರ ಆಶಿರ್ವಾದ ಪಡೆದರು.
ರಾತ್ರಿ ವೇಳೆಯಲ್ಲಿ ಶ್ರೀ ವೀರಭದ್ರೇಶ್ವರ ಭಜನಾ ಮಂಡಳಿ ವತಿಯಿಂದ ಶಿವರಾತ್ರಿ ವಿಶೇಷ ಭಜನಾ ಪದಗಳ ಕಾರ್ಯಕ್ರಮವು ತಡರಾತ್ರಿಯವರೆಗೂ ಜರುಗಿತು.