ಕಾಂಗ್ರೆಸ್ ಕಾರ್ಯಾಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ..
e-ಸುದ್ದಿ ಇಳಕಲ್ಲ
ಇಳಕಲ್ ನಗರದ ಎಸ್ ಆರ್ ಕೆ ಗೃಹ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯಿತು.
ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪುಷ್ಪ ನಮನ ಸಲ್ಲಿಸುವ ಮೂಲಕ ಪೂಜೆ ಸಲ್ಲಿಸಿದರು.
ಈ ಸರಳ ಕಾರ್ಯಕ್ರಮದಲ್ಲಿ ಶಿವಾಜಿ ಮಹಾರಾಜರ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿಗಾರರು :ಶರಣಗೌಡ ಕಂದಕೂರ.