ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘಕ್ಕೆ ನೂತನವಾಗಿ ಪದಾಧಿಕಾರಿಗಳ ಆಯ್ಕೆ ಹಾಗೂ ಸನ್ಮಾನ…

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘಕ್ಕೆ ನೂತನವಾಗಿ ಪದಾಧಿಕಾರಿಗಳ ಆಯ್ಕೆ ಹಾಗೂ ಸನ್ಮಾನ…

e-ಸುದ್ದಿ ಇಳಕಲ್

ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಶ್ರೀ ಯಮನಪ್ಪ ವಡ್ಡರವರು ಆಯ್ಕೆಯಾಗಿದ್ದಾರೆ.

ಹಾಗೂ ಸಂಘಟನೆ ಬಗ್ಗೆ ವಿಶೇಷವಾಗಿ ನಿರಂತರವಾಗಿ ಕೆಲಸ ಮಾಡುವ ಆಸಕ್ತಿ ಇರುವ ಇಬ್ಬರು ಪ್ರತಿನಿಧಿಗಳಾದ
ಮಹಾದೇವ್ ಹಳ್ಳಿಹುಡೇದ, ಯಶೋದಾ ನಾಣಿಕೇರಿ, ಬಾರಕೇರ್ ಇವರನ್ನು ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆ ಆದವರನ್ನು ಶಾಲು ಹೊದಿಸಿ ಹಾರ ಹಾಕಿ ತಾಲೂಕ ಘಟಕದ ವತಿಯಿಂದ ಸತ್ಕರಿಸಿದರು.

ಈ ಸಂದರ್ಭದಲ್ಲಿ ಉಪತಹಶಿಲ್ದಾರರಾದ ಚಿದಾನಂದ ವಡವಡಗಿ, ತಾಲೂಕ ಘಟಕದ ಅಧ್ಯಕ್ಷರಾದ ಶ್ರೀ ಶಂಕರ್ ಲಮಾಣಿ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!