ವಿಜಯಸಂಕಲ್ಪಯಾತ್ರ ಸಮಾರಂಭ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ವೈ…

e-ಸುದ್ದಿ ವರದಿ ಇಳಕಲ್

ಇಳಕಲ್ ನಗರಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಆಗಮಿಸಿದ ಹಿನ್ನೆಲೆಯಲ್ಲಿ ರೈತನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ವಿಜಯ ಸಂಕಲ್ಪಯಾತ್ರೆಯ ಬೃಹತ್ ರೋಡ್ ಶೋ ನಡೆಸಿದರು.

ನಂತರ ನಗರದ ಎಸ್ ಆರ್ ಕಂಠಿ ವೃತ್ತದಲ್ಲಿ ವಿಜಯ ಸಂಕಲ್ಪ ಯಾತ್ರೆಯ ವೇದಿಕೆಯ ಸಮಾರಂಭ ಬಿರು ಬಿಸಿಲಿನಲ್ಲಿ ನಡೆಯಿತು. ಈ ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ ಮೂಲಕ ರೈತನಾಯಕ ಬಿಎಸ್ ಯಡಿಯೂರಪ್ಪನವರು ಉದ್ಘಾಟಿಸಿದರು.

ಈ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವ ಭೈರತಿ ಬಸವರಾಜ್, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಶಾಸಕ ದೊಡ್ಡನಗೌಡ ಜಿ ಪಾಟೀಲ್, ಸಂಸದ ಪಿ ಸಿ ಗದ್ದಿಗೌಡರ್ ಹಾಗೂ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಮತ್ತು ಬಿಜೆಪಿಯ ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!