ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ – ಬಿ.ವೈ .ವಿಜಯೇಂದ್ರ

 

 

 

ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ – ಬಿ.ವೈ .ವಿಜಯೇಂದ್ರ

e ಸುದ್ದಿ ಲಿಂಗಸುಗೂರು

ವರದಿ ವೀರೇಶ ಅಂಗಡಿ ಗೌಡೂರು

ಮುಂಬರುವ 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಲಿಂಗಸುಗೂರು ಪಟ್ಟಣದಲ್ಲಿ ಸೋಮುವಾರ ಸಂಜೆ ಆಯೋಜಿಸಿದ್ದ ಬಿಜೆಪಿ ಎಸ್.ಟಿ ಮೋರ್ಚಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.ಆದುದರಿಂದ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸುತ್ತಿದ್ದಾರೆ. ಸ್ವಾತಂತ್ರ್ಯ ನಂತರ ಏಳು ದಶಕಗಳ ಕಾಲ ಆಡಳಿತವನ್ನು ನಡೆಸಿದ ಕಾಂಗ್ರೆಸ್ ಸರ್ಕಾರವು ಕಲ್ಲಿದ್ದಲು ಹಗರಣ, ಕಾಮನ್ ವೆಲ್ತ್,2 ಜಿ ಸ್ಪೆಕ್ಟ್ರಮ್ ಹಗರಣ ಸೇರಿದಂತೆ ಹಲವು ಹಗರಣಗಳಿಂದಲೇ ಭ್ರಷ್ಟಾಚಾರ ನಡೆಸುತ್ತಾ ಬಂದಿದೆ.ಹೆಗಾದರು ಮಾಡಿ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆಯೆಂದು ಹಗಲು ಕನಸು ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಬಿ.ಎಸ್.ಯಡಿಯೂರಪ್ಪನವರು ಹೋರಾಟದ ಮೂಲಕ ಪಕ್ಷವನ್ನು ಕಟ್ಟಿ ಬೆಳೆಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ.
ಅಧಿಕಾರ ಅವಧಿಯಲ್ಲಿ ಜಾತಿ ಭೇದ ಮಾಡದೆ ಸರ್ವ ಸಮುದಾಯಕ್ಕೂ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಹಟ್ಟಿ ಚಿನ್ನದ ಗಣಿಯ ಅಧ್ಯಕ್ಷ ಮಾನಪ್ಪ ವಜ್ಜಲ್ ಮಾತನಾಡಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ಸಿ.ಎಂ. ಆಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ್,ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಶರಣು ತಳ್ಳಿಕೇರಿ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ನ.ಯೋ.ಪ್ರಾ ಅಧ್ಯಕ್ಷ ಡಾ.ಶಿವಬಸಪ್ಪ ಹೆಸರೂರು, ಪುರಸಭೆ ಅಧ್ಯಕ್ಷೆ ಸುನಿತಾ ಕೆಂಬಾವಿ,ಗಿರಿ ಮಲ್ಲನಗೌಡ ಕರಡಕಲ್, ಬಸವಂತರಾಯ ಕುರಿ, ತಾಲೂಕು ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ , ಬಿಜೆಪಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು.

Don`t copy text!