e-ಸುದ್ದಿ, ಮಸ್ಕಿ
ಪಟ್ಟಣದ ಬಸವೇಶ್ವರ ನಗರದ ಉದ್ಯಾನವನದಲ್ಲಿ ಪುನರ್ ನಿರ್ಮಿಸಿರುವ ದೇವಸ್ಥಾನದ ಉದ್ಘಾಟನೆ ಹಾಗೂ ನೂತನ ಗಣೇಶ ಮೂರ್ತಿ ಪ್ರತಿಷ್ಠಾಪನೆ ಶನಿವಾರ ಜರುಗಿತು.
ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ನೂತನ ದೇವಸ್ಥಾನ ಉದ್ಘಾಟನೆ ಮಾಡಿ ಕಳಸಾರೋಹಣ ನೆರವೇರಿಸಿದರು.
ಗಚ್ಚಿನ ಮಠದ ಶ್ರೀವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಅಂಕುಶದೊಡ್ಡಿಯ ಶ್ರೀವಾಮದೇವ ಶಿವಾಚಾರ್ಯರ ಸ್ವಾಮೀಜಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಿಗ್ಗೆ 5 ಗಂಟೆಗೆ ಶ್ರೀವಾಮದೇವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದಚು. ಪುರಸಭೆ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಗ್ರಾಮದ ಮುಖಂಡರಾದ ಮಹಾದೇವಪ್ಪಗೌಡ ಪಾಟೀಲ, ಅಪ್ಪಾಜಿಗೌಡ ಪಾಟೀಲ, ಎಚ್.ಬಿ.ಮುರಾರಿ, ವಿರುಪಾಕ್ಷಪ್ಪ ಹೂವಿನಬಾವಿ, ಆದಯ್ಯಸ್ವಾಮಿ ಕ್ಯಾತ್ನಟ್ಟಿ ಹಾಗೂ ಇತರರು ಭಾಗವಹಿಸಿದ್ದರು.