ಬಲಕುಂದಿ ಗ್ರಾಮದ ನರೇಗಾ ಕೆಲಸದ ಸ್ಥಳದಲ್ಲಿ ಕೂಲಿಕಾರ್ಮಿಕರಿಗೆ ಮತದಾನ ಜಾಗೃತಿ….
e-ಸುದ್ದಿ ಇಳಕಲ್
ಇಳಕಲ್ ತಾಲೂಕಿನ ಬಲಕುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆ ಹೊಳೆತ್ತುವ ಕಾಮಗಾರಿ ನಡೆಯುತ್ತಿದ್ದು, ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಅಭಿಯಾನ ಹಾಗೂ ಜಲ ಸಂಜೀವಿನಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಮಾನ್ಯ ಯೋಜನಾ ನಿರ್ದೇಶಕರು ಹಾಗೂ ಸಹಾಯಕ ಯೋಜನಾಧಿಕಾರಿಗಳು
ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿದರು.
ಬಳಿಕ ನರೇಗಾ ಕೂಲಿಕಾರರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು DIEC ,ಐಇಸಿ ಸಂಯೋಜಕರು, , ಗ್ರಾಮ ಪಂಚಾಯಿತಿ ಕಾರ್ಯದರ್ಶಿ, TC ,TRM,BFT,ಕಾಯಕ ಮಿತ್ರರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ