e-ಸುದ್ದಿ, ಮಸ್ಕಿ
ಪಟ್ಟಣದ ಗಚ್ಚಿನಮಠದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಕವಿಗೋಷ್ಟಿ ಕಾರ್ಯಕ್ರಮವನ್ನು ಗಚ್ಚಿನ ಹಿರೇಮಠದ ಶ್ರೀವರರುದ್ರಮುನಿ ಶಿವಾಚಾರ್ಯರು ಉದ್ಘಾಟಿಸಿದರು.
ಲಿಂಗಸುಗೂರು ತಾಲೂಕು ಕಸಾಪ ಅಧ್ಯಕ್ಷ ಜಿ.ವಿ.ಕೆಂಚನಗುಡ್ಡ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮಹಾಂತೇಶ ಮಸ್ಕಿ, ಸಿ.ದಾನಪ್ಪ, ಡಾ.ಮಲ್ಲಿಕಾರ್ಜುನ ಇತ್ಲಿ, ಕಸಾಪ ಅಧ್ಯಕ್ಷ ಘನಮಠದಯ್ಯ ಸಾಲಿಮಠ ಹಾಗೂ ಕಸಾಪ ಪದಾಧಿಕಾರಿಗಳು ಇದ್ದರು.