ಹಿರೇ ಓತಗೇರಿ ಗ್ರಾಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತೋತ್ಸವ….

e-ಸುದ್ದಿ ಇಳಕಲ್

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಮಹಾಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಜಯಂತೋತ್ಸವ ಡೊಳ್ಳು ವಾದ್ಯಗಳೊಂದಿಗೆ, ಕಳಸದೊಂದಿಗೆ ಭಜಂತ್ರಿ ಮೇಳದೊಂದಿಗೆ, ತಾಯಂದಿರ ಕಳಸದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಾವಚಿತ್ರ ಮೆರವಣಿಗೆಯೊಂದಿಗೆ ಅದ್ದೂರಿಯಾಗಿ ಜರುಗಿತು.

ಹೇಮರೆಡ್ಡಿ ಮಲ್ಲಮ್ಮನವರ ಜಯಂತೋತ್ಸವ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಅನ್ನಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿವಿಧ ತಾಲೂಕಿನ ಸದ್ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ವರದಿಗಾರರು; ಶರಣಗೌಡ ಕಂದಕೂರ

Don`t copy text!