ನರೇಗಾ ಕೂಲಿಕಾರರಿಗೆ ಅರೋಗ್ಯ ತಪಾಸಣಾ ಶಿಬಿರ…
e-ಸುದ್ದಿ ವರದಿ ಇಳಕಲ್
ಇಳಕಲ್ ತಾಲೂಕಿನ ಬೂದಿಹಾಳ S kಗ್ರಾಮ ಪಂಚಾಯತಿ ವ್ಯಾಪ್ತಿಯ ಬೂದಿಹಾಳ SK ಗ್ರಾಮದಲ್ಲಿ ಹಳ್ಳ ಹೊಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ರೋಜಗಾರ ದಿನ ಜೊತೆಗೆ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಜಲ ಸಂಜೀವಿನಿ ಅಭಿಯಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯಿತಿ ಪಿಡಿಓ ,ಕಾರ್ಯದರ್ಶಿಗಳು ಹಿರಿಯ ವೈದ್ಯಾಧಿಕಾರಿಗಳು ಹಾಗೂ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯದ ಬಗ್ಗೆ ವಹಿಸಬೇಕಾದ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು. ಬಳಿಕ ಕೂಲಿ ಕಾರ್ಮಿಕರಿಗೆ ಬಿಪಿ, ಶುಗರ್ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಐಇಸಿ ಸಂಯೋಜಕರು,TAE , BFT,ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಾಯಕ ಮಿತ್ರರು, ಕೆಎಚ್ ಪಿಟಿ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಕಾಯಕ ಬಂಧುಗಳು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ