ಇಂದು ಇಳಕಲ್ ನಗರಕ್ಕೆ ಸಚಿವ ಎಂ ಬಿ ಪಾಟೀಲ್ ಆಗಮನ ….
e-ಸುದ್ದಿ ವರದಿ ಇಳಕಲ್
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ ಬಿ ಪಾಟೀಲ್ ಅವರು ಇಂದು ಮಧ್ಯಾಹ್ನ ಇಳಕಲ್ ನಗರಕ್ಕೆ ಸಚಿವರಾದ ಮೇಲೆ ಪ್ರಥಮ ಬಾರಿಗೆ ಆಗಮಿಸಲಿದ್ದಾರೆ.
ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದು ಕುಷ್ಟಗಿ ಮಾರ್ಗವಾಗಿ ಇಳಕಲ್ ನಗರಕ್ಕೆ ಆಗಮಿಸಿ ನಗರದ ಶ್ರೀ ವಿಜಯ ಮಹಾಂತೇಶ್ವರ ಮಠಕ್ಕೆ ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆಯಲಿದ್ದಾರೆ.
ವರದಿಗಾರರು: ಶರಣಗೌಡ ಕಂದಕೂರ