ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್….

ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್….

e-ಸುದ್ದಿ ವರದಿ:ಇಳಕಲ್

ಇಳಕಲ್ ತಾಲೂಕಿನ ಗೋನಾಳ್ ಎಸ್ ಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆಯನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ನೆರವೇರಿಸಿದರು.

ನೂತನವಾಗಿ ಶಾಸಕರಾದ ಮೇಲೆ ಅವರ ಅಭಿಮಾನಿಗಳು ಕಾರ್ಯಕರ್ತರು ಶಾಲು ಹಾರಗಳನ್ನು ತರುತ್ತಿದ್ದರು. ಹೀಗಾಗಿ ಸ್ವತಃ ಶಾಸಕರೇ ಶಾಲು ಹೂವಿನ ಹಾರಗಳ ಬದಲಾಗಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ನೀಡಿ ಎಂದು ಕರೆ ನೀಡಿದ್ದರು. ಹೀಗಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಈ ದಿನ ತಾಲೂಕಿನ ಗೋನಾಳ ಎಸ್ ಕೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡುವ ಮೂಲಕ ವಿಶಿಷ್ಟತೆಗೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷರಾದ ಮಹಾಂತೇಶ್ ಕಡಿವಾಲ್, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಎಸ್ ಡಿ ಎಮ್ ಸಿ ಅಧ್ಯಕ್ಷರು ಸದಸ್ಯರು, ಶಾಲೆಯ ಮುಖ್ಯ ಗುರುಗಳು ಸಹ ಶಿಕ್ಷಕರು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!