ಉಚಿತ ಬಸ್ ಟಿಕೇಟ್ ನೀಡುವ ಮೂಲಕ ಶಕ್ತಿ ಯೋಜನೆಗೆ’ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್…
e-ಸುದ್ದಿ ಇಳಕಲ್
ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಹಾಗೂ ಕಾಂಗ್ರೆಸ್ ಪಕ್ಷ ಚುನಾವಣಾ ಸಮಯದಲ್ಲಿ ಘೋಷಿಸಿದ್ದ ಮೊದಲನೇಯ ಗ್ಯಾರಂಟಿ ಯೋಜನೆಯಾದ ಮಹಿಳೆಯರ ಉಚಿತ ಪ್ರಯಾಣದ ಸಾರಿಗೆ ಶಕ್ತಿ ಯೋಜನೆಯನ್ಮು ಅಧಿಕೃತವಾಗಿ
ಶಾಸಕ ವಿಜಯಾನಂದ ಕಾಶಪ್ಪನವರ್ ಚಾಲನೆ ನೀಡಿದರು.
ಇಳಕಲ್ ನಗರದ ಬಸ್ ಘಟಕದಲ್ಲಿ ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಘಟಕದ ವ್ಯವಸ್ಥಾಪಕರಾದ ಎಸ್ ಆರ್ ಸೊನ್ನದ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು, ಪ್ರಯಾಣಿಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ