ಇಳಕಲ್ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಯಶ್ರೀ ಎಮ್ಮಿ ದಿಡೀರ್ ಭೇಟಿ 

ಇಳಕಲ್ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಯಶ್ರೀ ಎಮ್ಮಿ ದಿಡೀರ್ ಭೇಟಿ 

 e-ಸುದ್ದಿ  ಇಳಕಲ್

ಇಳಕಲ್ ನಗರದ ಸರ್ಕಾರಿ ಆಸ್ಪತ್ರೆಗೆ ಬಾಗಲಕೋಟ್ ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ಜಯಶ್ರೀ ಎಮ್ಮಿ ದಿಡೀರ್ ಭೇಟಿ ನೀಡಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಅಲ್ಲದೆ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಬಾಗಲಕೋಟ್ ಜಿಲ್ಲಾ ಆರೋಗ್ಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿದರು.

ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ಸಿಬ್ಬಂದಿಗಳು ಮಧ್ಯಾಹ್ನದ ವೇಳೆಯಲ್ಲಿ ಆಸ್ಪತ್ರೆಗೆ ಗೈರು ಹಾಜರಾಗಿದ್ದರು. ಗೈರು ಹಾಜರಾದ ಬಗ್ಗೆ ವೈದ್ಯಾಧಿಕಾರಿಗಳನ್ನು ಕೇಳಿದಾಗ ಊಟಕ್ಕೆ ಹೋಗಿದ್ದಾರೆ ಎಂದರು. ನೆಪ ಹೇಳಿ ಗೈರು ಹಾಜರಾಗಿದ್ದ ಸಿಬ್ಬಂದಿಗಳ ಒಂದು ದಿನದ ಅರ್ಧ ವೇತನವನ್ನು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ ಆರೋಗ್ಯ ಇಲಾಖೆಯ ಸಮವಸ್ತ್ರದೊಂದಿಗೆ ಕರ್ತವ್ಯ ನಿರ್ವಹಿಸಿ ಎಂದು ಸಿಬ್ಬಂದಿಗಳಿಗೆ ಸೂಚಿಸಿದರು.
ಹಂತಹಂತವಾಗಿ ಆಸ್ಪತ್ರೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವೈದ್ಯಾಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ, ಸಾರ್ವಜನಿಕರಿಗೆ ಅನುಕೂಲವಾಗುವ ಮೂಲಭೂತ ಸೌಲಭ್ಯಗಳನ್ನು ಆದಷ್ಟು ಬೇಗನೆ ಈಡೇರಿಸುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!