ಪ್ರಕ್ಷೀಪ್ತ ಮತ್ತು ಖೊಟ್ಟಿ ವಚನಗಳ ಒಂದು ನಮೂನೆ
ಈ ಕೆಳಗಿನ ವಚನವು ಚೆನ್ನ ಬಸವಣ್ಣನವರ ವಚನವೆಂದು ದಾಖಲಾಗಿದ್ದು ನನ್ನ ವ್ಯಕ್ತಿಗತ ಅಭಿಪ್ರಾಯ ಮತ್ತು ಅಧ್ಯಯನದ ಅನುಭವದಲ್ಲಿ
ಹೇಳುವದಾದರೆ ಕೆಳಗಿನ ವಚನ
ಪ್ರಕ್ಷೀಪ್ತ ಮತ್ತು ಖೊಟ್ಟಿ ವಚನವೆಂದು ನಿರ್ಣಯಕ್ಕೆ ಬರುತ್ತೇನೆ. ವಚನದಲ್ಲಿ ವಿಷ್ಣು ವಾಮದೇವ ಮುಂತಾದ ದೇವರ ಸ್ತುತಿ ಸ್ಮರಣೆ ಇರುವುದು ಕಂಡು ಬರುತ್ತದೆ ಇಂತಹ ಅನೇಕ ದೋಷ ಪ್ರಮಾದಗಳು ವಚನ ಸಂಪುಟದಲ್ಲಿ ಹಾಗೆ ಉಳಿದಿವೆ.
ವಚನ ಅಧ್ಯಯನ ವೇದಿಕೆ ಮತ್ತು ಬಸವ ತಿಳುವಳಿಕೆ ಅಕ್ಕನ ಅರಿವು ಮತ್ತು ಸಂಶೋಧನಾ ಕೇಂದ್ರ ಪುಣೆ ಇವರ ಜಂಟಿ ಸಂಘಟನೆಗಳಲ್ಲಿ
ವಚನಗಳ ಆಶಯ ಗುರುತಿಸಿ ಅವುಗಳ ಶುದ್ಧೀಕರಣದ ಕಾರ್ಯಕ್ಕೆ ಮುಂದಾಗಿದೆ.
ವಚನ ಹೀಗಿದೆ
ಗುದ ಸ್ಥಾನದಲ್ಲಿ ಆಧಾರ ಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣ ವರ್ಣದ ತೇಜ, ಬಾಲ ಏಕಕೋಟಿ ಸೂರ್ಯಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣ ವರ್ಣದ ಲಿಂಗ, ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮ ಮುಖ, ಸದ್ಯೋಜಾತವಕ್ತ್ರ, ಆಧಾರಚಕ್ರ.
ಗುಹ್ಯ ಸ್ಥಾನದಲ್ಲಿ ಸ್ವಾದಿಷ್ಠಾನ ಚಕ್ರ, ಅಲ್ಲಿಗೆ ಅಪ್ಪುವೆಂಬ
ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ಧವಳ ವರ್ಣದ ತೇಜ, ಬಾಲ ದ್ವಿಕೋಟಿ ಸೂರ್ಯ ಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಧವಳ ವರ್ಣದ ಲಿಂಗ, ಅದು ಗುರಲಿಂಗ, ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರ ಮುಖ, ವಾಮದೇವವಕ್ತ್ರ, ಸ್ವಾದಿಷ್ಠಾನ ಚಕ್ರ.
ನಾಭಿ ಸ್ಥಾನದಲ್ಲಿ ಮಣಿಪೂರಕ ಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯ ವರ್ಣದ ತೇಜ, ಬಾಲ ತ್ರಿಕೋಟಿ ಸೂರ್ಯ ಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯ ವರ್ಣದ ಲಿಂಗ, ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ.
ಅದು ದೇವರಿಗೂ ತಮಗೂ ದಕ್ಷಿಣ ಮುಖ, ಅಘೋರವಕ್ತ್ರ, ಮಣಿಪೂರಕ ಚಕ್ರ.
ಹೃದಯ ಸ್ಥಾನದಲ್ಲಿ ಅನಾಹತ ಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ, ಕಪೋತವರ್ಣದ ತೇಜ,
ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ
ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ
ಓಂ ವಾಂ ವಾಂ ವಾಂ ಎಂಬ ನಾದಘೋಷ.
ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ
ಎಂಬ ದ್ವಾದಶಾಕ್ಷರ
ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ.
ಕಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ,
ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ,
ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ
ಅನಂತಕೋಟಿ ಮಿಂಚುಗಳ ವರ್ಣದ ಲಿಂಗ-
ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ
ನಾದಘೋಷ]. ಎಸಳು ಹದಿನಾರರಲ್ಲಿ
ಅ ಆ ಇ ಈ ಉ ಊ ಋ ೂ ಏ ಐ ಓ ಔ ಅಂ ಅಃ ಎಂಬ
ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ-
ಈಶಾನವಕ್ತ್ರ, ವಿಶುದ್ಧಿಚಕ್ರ.
ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ
ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ.
ಬಾಲಷಟ್ಕೋಟಿ ಸೂರ್ಯಪ್ರಕಾಶ
ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ
ಎಡಗಡೆಯ ಪಾದ ಕೆಂಪು ವರ್ಣ,
ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ.
ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ.
ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ]
ಅದು ದೇವರಿಗೂ ತನಗೂ ಗಂಬಿರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ.
ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ
ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ
ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ,
ಬಾಲ ಅನಂತಕೋಟಿಸೂರ್ಯಪ್ರಕಾಶ
ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ
ಮಹಾಜ್ಯೋತಿರ್ವರ್ಣದ ಲಿಂಗ.
ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ,
ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ-
ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ.
ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ
ವಿಶ್ವತೋ ಬಾಹುರುತ ವಿಶ್ವತಃ ಪಾತ್
ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ
ದ್ರ್ಯಾವಾ ಭೂಮೀ ಜನಯನ್ ದೇವ ಏಕಃ
ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ
ಕೂಡಲಚೆನ್ನಸಂಗಮದೇವಾ.
ಇಂತಹ ಅನೇಕ ವಿಚಾರಗಳು ವಚನಗಳು ಸಂಪುಟದಲ್ಲಿ ಸೇರಿಕೊಂಡಿರುವ ಕಾರಣ ಸೈದ್ಧಾಂತಿಕ ಸ್ಪಷ್ಟತೆ ಧೃಡತೇ ಮಸುಕಾಗುತ್ತದೆ . ವಚನ ಚಳುವಳಿಯ ಮೂಲ ಆಶಯ ಸೋಲುತ್ತದೆ. ಕಾಣದ ಕೈಗಳು ಶೈವವಾದಿಗಳು ಜಾತಿವಾದಿಗಳು ಇಂತಹ ವಚನ ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಇಂತಹ ವಚನಗಳನ್ನು ಸಂಪುಟದಿಂದ ಕೈಬಿಡಬೇಕು.
ಓದುಗರು ತಮ್ಮ ಅಭಿಪ್ರಾಯ ಹಂಚಿ ಕೊಳ್ಳಲು ಮುಕ್ತ ಅವಕಾಶವಿದೆ
_ಡಾ ಶಶಿಕಾಂತ ಪಟ್ಟಣ ರಾಮದುರ್ಗ ೯೫೫೨೦೦೨೩೩೮