ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಗೌಡೂರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ
ಎ
ರಾಯಚೂರಿನಲ್ಲಿ ಸೋಮವಾರದಂದು ನಡೆದ 2023-24 ನೇ ಸಾಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಹಾಗೂ ಸ್ಪರ್ಶ ಟ್ರಸ್ಟ್ ಸಹಯೋಗದೊಂದಿಗೆ ABCD ಯೋಜನೆಯ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಗೌಡೂರಿನ ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ಜಯಶ್ರೀ ತಂದೆ ಜಗದೀಶ್ ತೃತೀಯ ಸ್ಥಾನ ಪಡೆದು ಶಾಲೆ ಮತ್ತು ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ.
ಈ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರಾದ ಮೊಹಮ್ಮದ್ ಫರಿದ್ ಅವರು ವಿದ್ಯಾರ್ಥಿನಿ ಯೊಂದಿಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಅವರಿಂದ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ವಿತರಿಸಿದರು .
ವಿದ್ಯಾರ್ಥಿನಿಯ ಈ ಸಾಧನೆಗೆ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ರಾಜಾ ಶೇತುರಾಮ್ ನಾಯಕ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮತಿ ವಿದ್ಯಾವತಿ,ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.