ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಅಧಿಕಾರ ಸ್ವೀಕಾರ

ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಅಧಿಕಾರ ಸ್ವೀಕಾರ

e-ಸುದ್ದಿ ರಾಯಚೂರು

ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಅವರು ಇಂದು ಶನಿವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ನೂತನ ಜಿಲ್ಲಾಧಿಕಾರಿಗೆ ಹೂಗುಚ್ಚ ನೀಡುವುದರ ಮೂಲಕ ಬರಮಾಡಿಕೊಂಡರು.

 

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕರಾಮ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿಗಳಾದ ಡಾ.ಕೆ.ಆರ್.ದುರುಗೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಇದ್ದರು.

Don`t copy text!