ಮುಖ್ಯಮಂತ್ರಿಗಳ ಪದಕ ಸ್ವಿಕರಿಸಿದ ಲಿಂಗಸುಗೂರಿನ ಸಹಾಯಕ ಜೈಲರ್ ಅಮರಪ್ಪ ಪೇರಿ
ಲಿಂಗಸುಗೂರು ತಾಲ್ಲೂಕಿನ ಕಾರಾಗೃಹ ಸಹಾಯಕ ಜೈಲರ್ ಅಮರಪ್ಪ ಪೇರಿ ಅವರ ಉತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ವತಿಯಿಂದ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನಡೆದ 2023 ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಮುಖ್ಯಮಂತ್ರಿಗಳ ಪದಕ ಪ್ರಧಾನ ಮಾಡಿದರು.
ನಂತರ ಪ್ರಶಸ್ತಿಗೆ ಭಾಜನರಾದ ಎಲ್ಲ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಗೃಹ ಸಚಿವರು ಶುಭಾಶಯ ತಿಳಿಸಿದರು.
ಈ ಸಂಧರ್ಭದಲ್ಲಿ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಯವರು ಸೇರಿದಂತೆ ಹಿರಿಯ ಅಧಿಕಾರಿಗಳು ವಿವಿಧ ಪದಕಗಳಿಗೆ ಭಾಜನರಾದ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.