ನಾರಾಯಣಪುರ ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

ನಾರಾಯಣಪುರ ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

e- ಸುದ್ದಿ  ಲಿಂಗಸುಗೂರು

ನಾರಾಯಣಪುರದ ಬಸವಸಾಗರ ಜಲಾಶಯದಿಂದ ಸುಮಾರು 65 ಸಾವಿರ ಕ್ಯೂಸೆಕ್ ಪ್ರಮಾಣದಷ್ಟು ನೀರನ್ನು ಕೃಷ್ಣಾ ನದಿಗೆ ಹರಿ ಬಿಡಲಾಗಿದೆ.

ಮಹಾರಾಷ್ಟ್ರ – ಕೃಷ್ಣ ಕಣಿವೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಲಮಟ್ಟಿಯಿಂದ ಬಸವಸಾಗರಕ್ಕೆ 50 ಸಾವಿರ ಕ್ಯೂಸೆಕ್ ಪ್ರಮಾಣದಷ್ಟು ನೀರು ಒಳಹರಿವು ಇದ್ದುದರಿಂದ, ಬಸವಸಾಗರದಿಂದ 22 ಕ್ರಸ್ಟ್ ಗೇಟುಗಳ ಮೂಲಕ 65 ಸಾವಿರ ಕ್ಯೂಸೆಕ್ ನೀರನ್ನು
ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

 

 

 

 

 

 

 

 

 

ರಾತ್ರಿ ವೇಳೆಗೆ ಹೊರಹರಿವು ಮತ್ತಷ್ಟು ಹೆಚ್ಚುವ ಸಂಭವವಿದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. ನದಿ ಪಾತ್ರದ ಗ್ರಾಮಸ್ಥರಿಗೆ, ಮೀನುಗಾರರಿಗೆ ಮುಂಜಾಗ್ರತಾ ಕ್ರಮವಾಗಿ ನದಿಗಿಳಿಯದಂತೆ ಜಿಲ್ಲಾಡಿಳಿತದಿಂದ ಎಚ್ಚರಿಕೆಯನ್ನು ನೀಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ತಾಲೂಕು ಮತ್ತು ಜಿಲ್ಲಾಡಳಿತ ತೆಗೆದುಕೊಂಡಿದೆ.

Don`t copy text!