ಉದ್ಯಾನವನ ಅಭಿವೃದ್ಧಿ ಪಡಿಸಲು ಒತ್ತಾಯ
e-ಸುದ್ದಿ ಬೆಳಗಾವಿ
ಬಸವ ಕಾಯಕ ಜೀವಿಗಳ ಸಂಘ
ಮತ್ತು ಬಸವ ಪರ ಸಂಘಟನೆಗಳು ಬೆಳಗಾವಿ.
ಇವರ ನೇತೃತ್ವದಲ್ಲಿ ಬೆಳಗಾವಿಯ ಬಸವೇಶ್ವರ ವೃತ್ತದಲ್ಲಿ ಇರುವ ಉದ್ಯಾನವನವನ್ನು ಅಭಿವೃದ್ಧಿಪಡಿಸಲು ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಮಾನ್ಯ ಆಯುಕ್ತರು ಮಹಾನಗರ ಪಾಲಿಕೆ ಬೆಳಗಾವಿ ಇವರಿಗೆ ಮನವಿ ಸಲ್ಲಿಸಿ ಒತ್ತಾಯಿಸ ಲಾಯಿತು.
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ, ಯುವ ಘಟಕ ಜಾಗತಿಕ ಲಿಂಗಾಯತ ಮಹಾಸಭಾ, ಚನ್ನಬಸವ ಫೌಂಡೇಶನ್, ಬಸವೇಶ್ವರ ಯುವಕ ಮಂಡಳಿ, ಸಡರ್ ಸಂಸ್ಥೆ, ಲಿಂಗಾಯತ ಸೇವಾ ಸಮಿತಿ, ಹಡಪದ ಅಪ್ಪಣ್ಣ ಸಮಾಜ, ಹರಳಯ್ಯ ಸಮಾಜ, ಕಾರ್ಯನಿರತ ಗುತ್ತಿಗೆದಾರರ ಸಂಘ, ಮತ್ತು ಬಸವಾಭಿಮಾನಿಗಳು ಭಾಗವಹಿಸಿದ್ದರು