ಗ್ರಾ.ಪಂ ಚುನಾವಣೆಗೆ ಎಂಜಿನಿಯರಿಂಗ್ ಪದವೀಧರ ಸ್ಪರ್ಧೆ
ವರದಿ : ಬಸವರಾಜ ಭೋಗಾವತಿ
e-ಸುದ್ದಿ, ಮಾನ್ವಿ:
ತಾಲ್ಲೂಕಿನ ಪೋತ್ನಾಳ ಗ್ರಾಮ ಪಂಚಾಯಿತಿ ಚುನಾವಣೆಗೆ ಎಂಜಿನಿಯರಿಂಗ್ ಪದವೀಧರ ನವೀನ್ ನಾಡಗೌಡ ಸ್ಪರ್ಧಿಸಿರುವುದು ವಿಶೇಷವಾಗಿದೆ. ಗ್ರಾಮದ 2ನೇ ವಾರ್ಡಿನ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಇ(ಕಂಪ್ಯೂಟರ್ ವಿಜ್ಞಾನ) ಪದವಿ ವ್ಯಾಸಂಗ ಮಾಡಿದ್ದಾರೆ. 2016ರಲ್ಲಿ ಪದವಿ ಅಧ್ಯಯನ ಮುಗಿದ ನಂತರ ಪೋತ್ನಾಳ ಗ್ರಾಮದಲ್ಲಿ ವಿ.ಪಿ.ನಾಡಗೌಡ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನವೀನ್ ಅಜ್ಜ ದಿವಂಗತ ವಿ.ಪಿ.ನಾಡಗೌಡ 1978ರಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರ ತಾಯಿ ವಿಜಯಲಕ್ಷ್ಮೀ ನಾಡಗೌಡ 2010ರಲ್ಲಿ ಪೋತ್ನಾಳ ತಾಲ್ಲೂಕು ಪಂಚಾಯಿತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
‘ ವಿದ್ಯಾವಂತ ಯುವಕರು ರಾಜಕೀಯ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು ಜನಪ್ರತಿನಿಧಿಗಳಾಗಬೇಕು ಎಂಬುದು ನನ್ನ ಅಭಿಪ್ರಾಯ. ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಗುರಿ ಇದೆ. ಕಾರಣ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ನವೀನ್ ನಾಡಗೌಡ ತಿಳಿಸಿದ್ದಾರೆ
——————
ಕ್ಣಣ ಕ್ಷಣದ ಸುದ್ದಿಯನ್ನು
ತಾವು ವೀಕ್ಷಿಸಲು
*e-ಸುದ್ದಿ ಅಂತರಜಾಲ ಪತ್ರಿಕೆ ನೋಡಿ.*
ಪ್ರತಿದಿನದ ಮತ್ತು ಯಾವ ದಿನಾಂಕದ ಪತ್ರಿಕೆ ನೊಡಬಯಸಿವಿರೊ ಆ ದಿನದ ಸುದ್ದಿ ಓದಬಹುದು.
ಅದಕ್ಕಾಗಿ
ನಿವು ಮಾಡಬೆಕಾಗಿರೊದು
*ಬೆಲ್ ಬಟನ್ ಒತ್ತಿ ಸಬ್ ಸ್ಕ್ರೈವ್ ಆಗಿ ಮತ್ತು ನಮ್ಮವಾಟ್ಸಪ್ ಗ್ರೂಪಗೆಸೇರಲುಬಯಸಿದರೆವಾಟ್ಸ್ ಪ್ ಸಿಂಬಲ್ ಮೆಲೆ ಕ್ಲಿಕ್ ಮಾಡಿ*
🙏🙏🙏🙏🙏🙏