ಅ.೨೬ ರಂದು ಶೈಕ್ಷಣಿಕ ಸಮಾವೇಶ
ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಮಾವೇಶ ಹಾಗೂ ಶಿಕ್ಷಕರಿಗೆ ಸತ್ಕಾರ – ಪ್ರತಾಪಗೌಡ ಪಾಟೀಲ
e- ಸುದ್ದಿ ಮಸ್ಕಿ
ರಾಯಚೂರು ಜಿಲ್ಲೆ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಅ.26 ಶನಿವಾರ ಮಸ್ಕಿ ಪಟ್ಟಣದ ಶ್ರೀ ಭ್ರಮರಾಂಬ ದೇವಸ್ಥಾನದಲ್ಲಿ ಶೈಕ್ಷಣಿಕ ಸಮಾವೇಶ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಮಸ್ಕಿ ತಾಲ್ಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಗೌರವ ಅಧ್ಯಕ್ಷ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರ ಮಾಡಬೆಕಾದ ಕೆಲಸ ಮಾಡುತ್ತಿದ್ದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್.ಬೋಸರಾಜು ಆಗಮಿಸುವರು.
ರಾಯಚೂರು ಜಿಲ್ಲೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ ವಹಿಸುವರು. ರಾಯಚೂರು ಮತ್ತು ಕೊಪ್ಪಳ ಕ್ಷೇತ್ರದ ಸಂಸದರು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಸಕರು ಮತ್ತು ವಿಧಾನ ಪರಿಷತ್ತ ಸದಸ್ಯರು ಆಗಮಿಸಲಿದ್ದಾರೆ. ಜಿಲ್ಲೆಯ 200 ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದರು.
ಮಸ್ಕಿ ತಾಲ್ಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಎನ್, ಮಂಜುನಾಥ ಸ್ವಾಮಿ ತೊರಣದಿನ್ನಿ, ಕೆ.ವಿ.ರಡ್ಡಿ, ಲಿಂಗಪ್ಪ ಚವ್ಹಾಣ ಇದ್ದರು.