e-ಸುದ್ದಿ, ಮಸ್ಕಿ
ಪಟ್ಟಣದ ಮುಖ್ಯ ಬೀದಿಯಲ್ಲಿರುವ ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ದೀಪ ಹಚ್ಚುವ ಮೂಲಕ ಚಾಲನೆ ನೀಡಿದರು.
ಕಾರ್ತಿಕ ದೀಪೋತ್ಸವ ಅಂಗವಾಗಿ ಬೆಳಿಗ್ಗೆ ಶ್ರೀವೀರಭದ್ರ ದೇವರಿಗೆ ರುದ್ರಾಭೀಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು.
ಸಂಜೆ ವೀರಭಧ್ರದೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಮುಖಂಡರು, ಪದಾಧಿಕಾರಿಗಳು, ಮಹಿಳೆಯರು, ಮಕ್ಕಳು ಹಾಗೂ ಯುವಕರು ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಣೆ ಸಲ್ಲಿಸಿದರು. ಆಗಮಿಸಿದ ಭಕ್ತರಿಗೆ ದೇವಸ್ಥಾನ ಸಮಿತಿಯಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.