ಶ್ರೀಮತಿ ಶಶಿಕಲಾ ಭೋವಿರವರಿಗೆ ಗೌರವ ಡಾಕ್ಟರೇಟ್
ಪ್ರಸ್ತುತ ರಾಯಚೂರು ಜಿಲ್ಲಾ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶಶಿಕಲಾ ಭೋವಿರವರಿಗೆ ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬಾಜನರಾಗಿದ್ದಾರೆ
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಮುದುಗಲ್ ಪಟ್ಟಣದಲ್ಲಿ ವಾಸವಾಗಿರುವ ಶ್ರೀಮತಿ ಶಶಿಕಲಾ ಭೋವಿ ರವರು ಮೂಲತ *ಗ್ರಾನೈಟ್ ಉದ್ಯಮಿಗಳು
ಸಮಾಜ ಸೇವೆಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಶಶಿಕಲಾ ಬೋವಿಯವರು ವಿವಿಧ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಮಾಡುತ್ತಿದ್ದಾರೆ
ತಮ್ಮ ಸುತ್ತಮುತ್ತಲಿನ ಮಹಿಳೆಯರಿಗೆ ಸಹಕಾರವಾಗಲಿ ಎಂಬ ಭಾವನೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂದಾರ ಸ್ವ ಸಹಾಯ ಸಂಘದ ಸದಸ್ಯರಾಗಿದ್ದಾರೆ
ಪ್ರಾರಂಭದಲ್ಲಿ ಸ್ವ ಸಹಾಯ ಸಂಘದ ಸದಸ್ಯರಾಗಿದ್ದು ನಂತರ, ಮುದಗಲ್ ಒಕ್ಕೂಟದ ಅಧ್ಯಕ್ಷರಾಗಿ, ಲಿಂಗಸೂರು ತಾಲೂಕಿನಲ್ಲಿ ನಡೆದ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ರಾಯಚೂರಿನಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಪ್ರಾರಂಭವಾದ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಜನ ಜಾಗೃತಿ ಕಾರ್ಯಕ್ರಮಗಳಿಗೆ ತಮ್ಮದೇ ಆದ ಸಹಕಾರವನ್ನು ನೀಡಿರುತ್ತಾರೆ. ಶ್ರೀ ಕ್ಷೇತ್ರದ ಮಂಜುನಾಥ ಸ್ವಾಮಿಯ ಮೇಲೆ ಅಪಾರ ಭಕ್ತಿವುಳ್ಳ ಇವರು ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪಡೆದುಕೊಂಡಿರುವುದು ಅಭಿನಂದನಾರ್ಹ ಸಂಗತಿ.
ಗೌರವಾನ್ವಿತ ರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ಪರವಾಗಿ ಹೃದಯ ಸ್ಪರ್ಶಿ ಅಭಿನಂದನೆಗಳು