e-ಸುದ್ದಿ ಮಸ್ಕಿ
ಮಸ್ಕಿ ಕ್ಷೇತ್ರದ ಒಟ್ಟು 23 ಗ್ರಾಮ ಪಂಚಾಯಿತಿಗಳ ಪೈಕಿ 18 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಪಕ್ಷದ ಬೆಂಬಲಿತರು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಪಟ್ಟಣದ ಬಸವೇಶ್ವರ ನಗರದಲ್ಲಿರುವ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕ್ಷೇತ್ರಕ್ಕೆ ಒಳಪಡುವ 23 ಗ್ರಾ.ಪಂಗಳಲ್ಲಿ 446 ಕ್ಷೇತ್ರಗಳಿಗೆ ಬಿಜೆಪಿ ಪಕ್ಷದ ಬೆಂಬಲಿತ ನೂತನ ಸದಸ್ಯರಾಗಿ 310 ಜನ ಆಯ್ಕೆಯಾಗಿದ್ದು, 23 ಗ್ರಾ.ಪಂ ಪೈಕಿ 18 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರರು ಸ್ಪಷ್ಟ ಬಹುಮತದೊಂದಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು.
ಎರಡು ಪಂಚಾಯತಿಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ನಡುವೆ ಸಮಬಲವಿದೆ. ಮಸ್ಕಿ ಕ್ಷೇತ್ರ ವ್ಯಾಪ್ತಿಗೊಳಪಡುವ ಪಂಚಾಯಿತಿಗಳಲ್ಲಿ ಕಾಂಗ್ರೆಸ್‍ನವರು ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡಿವೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ವಾಸ್ತವಾಗಿ ಎರಡು ಅಥವಾ ಮೂರು ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ವಿಜೇತರರು ಅಧಿಕಾರಕ್ಕೇರಬಹುದು ಎಂದರು.
ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಧಾನ ಕಾರ್ಯದರ್ಶೀ ಶರಣಬಸವ ಸೊಪ್ಪಿಮಠ ಇದ್ದರು.
——————-
ಮಸ್ಕಿ ಕ್ಷೇತ್ರದ ಉಪಚುನವಾಣೆ ಜನವರಿ 15 ರೊಳಗಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಬಸವಕಲ್ಯಾಣ ಕ್ಷೇತ್ರದ ಚುನಾವಣೆ ಜೊತೆಗೆ ಮಸ್ಕಿ ಕ್ಷೇತ್ರದ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಆದ್ದರಿಂದ ನಾವು ಈಗಾಗಲೆ ಉಪಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡು ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲಾಗಿದೆ. ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ವಿತ ಎಂದು ಪ್ರತಾಪ್‍ಗೌಡ ಪಾಟೀಲ್ ಹೇಳಿದರು.
.