e-ಸುದ್ದಿ, ಮಸ್ಕಿ
ತಾಂಡಾಗಳಲ್ಲಿನ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಸಾಕಷ್ಟು ನೆರವು ನೀಡಿದೆ. ಬಿಜೆಪಿ ಸರ್ಕಾರ ಅಭಿವೃದ್ಧಿಯ ಪರವಾಗಿದೆ ಎಂದು ಮಾಜಿ ಶಾಸಕ ಪ್ರತಾಪ್‍ಗೌಡ ಪಾಟೀಲ್ ಹೇಳಿದರು.
ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಶನಿವಾರ ವಿವಿಧ ಅಭೀವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಂತರ ಮಾತನಾಡಿದ ಅವರು ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 27 ತಾಂಡಾಗಳಲ್ಲಿ ಸಿಸಿ ರಸ್ತೆ ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದಿಂದ 3 ಕೋಟಿ ಅನುದಾನ ಲಭಿಸಿದೆ ಎಂದರು.
ನನ್ನ ಅವಧಿಯಲ್ಲಿ ಕ್ಷೇತ್ರದ ಪ್ರತಿಯೊಂದು ಗ್ರಾಮ ಹಾಗೂ ತಾಂಡಾಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದೇನೆ. ಅಲ್ಲದೇ ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಡಳಿತದಲ್ಲಿ ಇರುವುದರಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಅನುಧಾನವನ್ನು ಬಿಡುಗಡೆ ಮಾಡಿಸಿದ್ದೇನೆ ಎಮದರು.
ತಾಂಡದ ಜನರು ಉತ್ತಮ ಗುಣ ಮಟ್ಟದ ಕಾಮಗಾರಿಗಳನ್ನು ಮಾಡಿಸಿಕೊಳ್ಳಬೇಕು ಎಂದರು.
ಬಂಜಾರ ಸಂಘದ ರಾಜ್ಯಾಧ್ಯಕ್ಷ ಪಾಂಡುರಂಗ ಪಮ್ಮಾರ್ ಮಾತನಾಡಿ ಪ್ರತಾಪಗೌಡ ಪಟೀಲ್ ಅವರು ತಮ್ಮ ಹಿಂದಿನ ಅಧಿಕಾರದ ಅವಧಿಯಲ್ಲಿ ತಾಂಡಾಗಳಿಗೆ ಸಾಕಷ್ಟು ಅನುಧಾನ ನೀಡಿದ್ದಾರೆ ಎಂದರು.
ಜಿಪಂ ಸದಸ್ಯೆ ರೇಣುಕಾ ಚಂದ್ರಶೇಖರ್ ಚಾಲನೆ ನೀಡಿದರು. ಬಿಜೆಪಿ ಮುಖಂಡರಾದ ಶಿವಪ್ಪ ಹುಬ್ಬಳ್ಳಿ, ಅಮರೇಶ ಅಡವಿಭಾವಿ ತಾಂಡಾ, ಮೌನೇಶ ಬುದ್ದಿನ್ನಿ, ಬಸನವಂತರಾಯ ಕುರಿ, ಪುರಸಭೆ ಮಾಜಿ ಸದಸ್ಯ ರವಿಗೌಡ ಪಾಟೀಲ್, ಅಮರೇಶ ಅಂತರಗಂಗಿ, ಆರ್.ಟಿ ನಾಯ್ಕ್, ಕೃಷ್ಣಮೂರ್ತಿ, ಮಾಜಿ ಗ್ರಾಪಂ ಸದಸ್ಯ ಉಮಾಪತಿ ಹಾಗೂ ಇತರರು ಇದ್ದರು.