e-ಸುದ್ದಿ, ಮಸ್ಕಿ
ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಬವ ಠಾಕ್ರೆ ಭಾರತದ ಒಕ್ಕೂಟ ವ್ಯವಸ್ಥೆ ವಿರುದ್ಧ ಹೇಳಿಕೆಗಳನ್ನು ನೀಡಿ ಉದ್ಧಡತನ ಪ್ರದರ್ಶಿಸುತ್ತಿದ್ದಾರೆ. ರಾಷ್ಟ್ರಪತಿಗಳು ಕೂಡಲೇ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕರವೇ ಮಸ್ಕಿ ತಾಲೂಕು ಘಟಕದ ಅಧ್ಯಕ್ಷ ಅಶೋಕ ಮುರಾರಿ ಒತ್ತಾಯಿಸಿದರು.
ಪಟ್ಟಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ ಬೆಳಗಾವಿ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಆದರೆ ಮಹಾರಾಷ್ಟ್ರ ಸರ್ಕಾರ ಹಾಗೂ ಶಿವಸೇನೆ ಗಡಿವಿಚಾರದಲ್ಲಿ ಕನ್ನಡಿಗರ ತಾಳ್ಮೆಯನ್ನು ಕೆಣಕುವ ಕೆಲಸ ಮಾಡುತ್ತಿದೆ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದರು.
ಕರ್ನಾಟಕ ನೆಲ,ಜಲ, ಬಾಷೆ ನಮ್ಮೇಲ್ಲರ ಹೊಣೆಯಾಗಿದ್ದು ಆದ್ದರಿಂದ ಕರ್ನಾಟಕ ರಕ್ಷಣಾ ವೇದಿಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಶಿವಸೇನೆಯವರು ಕನ್ನಡಿಗರ ಭಾವನೆಗೆ ದಕ್ಕೆಯಾಗುವಂತಹ ಹೇಳಿಕೆಗಳನ್ನು ನೀಡುವುದನ್ನ ಮುಂದುವರೆಸಿದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಅಶೋಕ ಮುರಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.