e-ಸುದ್ದಿ, ಮಸ್ಕಿ
ತಾಲೂಕಿನ ವಟಗಲ್ ಗ್ರಾಮದಲ್ಲಿ ನಿರ್ಮಿಸಿರುವ ಪರಿಶೀಷ್ಟ ಪಂಗಡದ ಇಂದಿರಾಗಾಂಧಿ ವಸತಿ ನಿಲಯವನ್ನು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭಾನುವಾರ ಫೆ.7ರಂದು ಉದ್ಘಾಟಿಸುವರು ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ತಿಳಿಸಿದರು.
ಪಟ್ಟಣದ ಬಸವೇಶ್ವರ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಪಾಮನಕಲ್ಲೂರು ಮತ್ತು ಹಾಲಪುರು ಗ್ರಾಮಗಳಲ್ಲಿ ತಲಾ 50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಮೆಟ್ರೀಕ್ ಪೂರ್ವ ವಸತಿ ನಿಲಯ, ವಾಲ್ಮೀಕಿ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಮಧ್ಯಹ್ನ 12 ಗಂಟೆಗೆ ಮಸ್ಕಿಯ ಭ್ರಮರಾಂಬ ದೇವಸ್ಥಾನದಲ್ಲಿ ನೂತನವಾಗಿ ಗ್ರಾ.ಪಂ.ಗಳಿಗೆ ಆಯ್ಕೆಯಾದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಸತ್ಕಾರ ಕಾರ್ಯಕ್ರಮ ಹಾಗೂ ಬಹಿರಂಗ ಸಭೆ ನಡೆಯಲಿದೆ. ರಾಯಚೂರು ಶಾಸಕ ಡಾ.ಶಿವರಾಜ ಪಾಟೀಲ, ಹಟ್ಟಿಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ, ದೇವದುರ್ಗಾ ಶಾಸಕ ಶಿವನಗೌಡ ನಾಯಕ, ಹಾಗೂ ಜಿಲ್ಲಾ ಮಟ್ಟದ ಪ್ರಮುಖರು ಭಾಗವಹಿಸುವರು.
ಮಸ್ಕಿ ತಾಲೂಕಿನಲ್ಲಿ ಒಟ್ಟು 27 ಗ್ರಾ.ಪಂ.ಗಳಿದ್ದು ಅವುಗಳಲ್ಲಿ 4 ಗ್ರಾ.ಪಂ.ಗಳಿಗೆ ಚುನಾವಣೆ ನಡೆದಿಲ್ಲ. 2 ಪಂಚಾಯತಿಗಳಲ್ಲಿ ತಡೆಯಾಜ್ಞೆ ಇದೆ. 21 ಗ್ರಾ.ಪಂ.ಚುನಾವಣೆ ನಡೆದಿದ್ದು ಅದರಲ್ಲಿ 16 ಗ್ರಾ.ಪಂ.ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯಾರ್ಥಿಗಳು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. 5 ಗ್ರಾ.ಪಂ.ಗಳು ಕಾಂಗ್ರೆಸ್ ಪಾಲಾಗಿವೆ ಎಂದು ಪ್ರತಪಗೌಡ ಪಾಟೀಲ ತಿಳಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಬಿಜೆಪಿ ಹಿರಿಯ ಮುಖಂಡ ಮಹಾದವೇಪ್ಪಗೌಡ ಪಾಟೀಲ, ಮಸ್ಕಿ ಮಂಡಲದ ಮಾಜಿ ಅಧ್ಯಕ್ಷ ವಿಶ್ವನಾಥರಡ್ಡಿ ಅಮೀನಗಡ, ಬಿಜಪಿ ಮಂಡಲ ಕಾರ್ಯದರ್ಶಿ ಶರಣಯ್ಯ ಸೊಪ್ಪಿಮಠ ಇದ್ದರು.