ಪ್ರತಿ ಹಳ್ಳಿಯಲ್ಲೂ ಕನ್ನಡದ ಕಂಪು ಪಸರಿಸಲಿ-ಪ್ರತಾಪಗೌಡ ಪಾಟೀಲ್

e-ಸುದ್ದಿ, ಮಸ್ಕಿ
ಕನ್ನಡ ನಾಡು ನುಡಿ ಜಲ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗರ ಜವಬ್ದಾರಿಯಾಗಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಬಿಡುಗಡೆ ಮಾಡಿ ಮಾತನಾಡಿದರು. ಇದೇ ಮೊದಲ ಬಾರಿಗೆ ಮಸ್ಕಿ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಸ್ಥಿತ್ವಗೊಂಡು ಪ್ರಥಮ ತಾಲೂಕು ಸಾಹಿತ್ಯ ಸಮ್ಮೇಳನ ಆಯೋಜಿಸಿರುವದು ಸಂತೋಷವಾಗಿದ್ದು ಸಾಹಿತ್ಯ ಸಮ್ಮೇಳಕ್ಕೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಸ್ಕಿ ತಾಲೂಕು ಅಧ್ಯಕ್ಷ ಘನಮಠದಯ್ಯ ಸಾಲಿಮಠ ಮಾತನಾಡಿ ಫೆ.14ರಂದು ಬಾನುವಾರದಂದು ಸಮ್ಮೇಳನ ಜರುಗಲಿದ್ದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರ ದ್ವಜಾರೋಹಣವನ್ನು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವಪ್ರಭು ಪಾಟೀಲ್ ನೇರವೇರಿಸಲಿದ್ದಾರೆ. ಪರಷತ್ ದ್ವಜಾರೋಹಣ ಮಸ್ಕಿ ಕಸಪಾ ಅಧ್ಯಕ್ಷ ಘನಮಠದಯ್ಯ ಸಾಲಿಮಠ ನೇರವೇರಿಸವರು. ಗಚ್ಚಿನ ಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಅಬ್ದುಲ್ ಖಾದರ್ ಜಿಲಾನಿ ಖಾಜಿ, ಸೆಂಟ್ ಜಾನ್ ಚರ್ಚನ ಫಾದರ್ ಚಾರ್ಲಸ್ ಸುಂದರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.
ಧ್ವಜಾರೋಹಣದ ನಂತರ 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಉಧ್ಘಾಟಿಸುವರು. ಸಮ್ಮೇಳನವನ್ನು ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಹರೀಶ ರಾಮಸ್ವಾಮಿ ಉಧ್ಘಾಟ£ ಮಾಡಲಿದ್ದು, ಸಂತೆಕಲ್ಲೂರಿನ ಘನಮಠೇಶ್ವರ ಮಠದ ಗುರುಬಸವ ಮಹಾಸ್ವಾಮಿಜಿ, ಮಸ್ಕಿಯ ಗಚ್ಚಿನ ಹಿರೇಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ವಿಧಾನಪರಿಷತ್ ಸದಸ್ಯರಾದ ಮನೋಹರ್ ಮಸ್ಕಿ, ಶರಣಪ್ಪ ಮಟ್ಟೂರು, ಮಾಜಿ ಕಾಡಾ ಅಧ್ಯಕ್ಷ ಬಸನಗೌಡ ತುರ್ವಿಹಾಳ ಭಾಗವಹಿಸುವರು.
ಪುಸ್ತಕ ಮಳಿಗೆಯನ್ನು ತಾಪಂ ಅಧ್ಯಕ್ಷ ಶಿವಣ್ಣ ನಾಯಕ, ಸಾಂಸ್ಕøತಿಕ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ವೀಜಯಲಕ್ಷ್ಮೀ ಪಾಟೀಲ್, ಕಲಾಪ್ರದರ್ಶನವನ್ನು ಪುರಸಭೆ ಉಪಾಧ್ಯಕ್ಷೆ ಕವಿತಾ ಮಾಟೂರು ಉದ್ಘಾಟಿಸುವರು.
ಎರಡು ವಿಚಾರ ಗೋಷ್ಟಿ ಹಾಗೂ ಕವಿಗೋಷ್ಟಿ ನಡೆಯಲಿದ್ದು ಸಂಜೆ 5 ಗಂಟೆಗೆ ಬಹಿರಂಗ ಅಧಿವೇಶನ ಜರುಗಲಿದೆ. ಸಂಜೆ 7.30ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಘನಮಠದಯ್ಯ ಸಾಲಿಮಠ ತಿಳಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಪ್ರಕಾಶ ಮಸ್ಕಿ ಇದ್ದರು.

Don`t copy text!