ಮಸ್ಕಿ ನಾಗಲಿಕ (ಸಿಂಪಿ) ಸಮಾಜದಿಂದ ಶಂಕರ ದಾಸಿಮಯ್ಯನವರ ಭಾವಚಿತ್ರದ ಮೆರವಣಿಗೆ


e-ಸುದ್ದಿ, ಮಸ್ಕಿ
ಜಡಿ ಶಂಕರಲಿಂಗೇಶ್ವರ ದೇವಸ್ಥಾನದ 21ನೆಯ ವಾರ್ಷಿಕೋತ್ಸವದ ನಿಮಿತ್ತ ಮಂಗಳವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಂಕರ ದಾಸಿಮಯ್ಯನವರ ಭಾವಚಿತ್ರದ ಮೆರವಣಿಗೆ ಪೂರ್ಣಕುಂಭದೊಂದಿಗೆ ನಡೆಯಿತು.
ಬೆಳಿಗ್ಗೆ ಭ್ರಮರಾಂಬ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಕನಕವೃತ್ತ, ತೇರು ಬೀದಿ, ದೈವದಕಟ್ಟೆ, ಡಾ. ಖಲೀಲ ವೃತ್ತ, ಹೇಮರೆಡ್ಡಿ ಮಲ್ಲಮ್ಮ ವೃತ್ತ, ಅಶೋಕ ವೃತ್ತದ ಮೂಲಕ ಸಾಗಿ ಜಡಿ ಶಂಕರಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿತು. ನಾಗಲಿಕ ಸಿಂಪಿ ಸಮಾಜದ 200ಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಹಾಗೂ ಕಳಸದೊಂದಿಗೆ ಪಾಲ್ಗೊಂಡಿದ್ದರು. ಸಮಾಜದ ಮಕ್ಕಳು ವಿವಿಧ ವೇಷ ಭೂಷಣ ತೊಟ್ಟು ಮೆರವಣಿಗೆಯಲ್ಲಿ ಸಾಗಿದರು. ಕಾಸಿ ತಂಡ, ನಂದಿ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರಗು ನೀಡಿದವು. ಜಡಿ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಜಡಿಶಂಕರಲಿಂಗಶ್ವರರ ವಿಗ್ರಹಕ್ಕೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಗಚ್ಚಿನಮಠದ ವರರುದ್ರಮುನಿ ಸ್ವಾಮಿಜಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ನಾಗಲಿಕ ಸಿಂಪಿ ಸಮಾಜದ ಗೌರವಾಧ್ಯಕ್ಷ ದೊಡ್ಡಪ್ಪ ಬುಳ್ಳಾ, ಅಧ್ಯಕ್ಷ ಸುರೇಶ ಹರಸೂರು, ಮಲ್ಲಿಕಾರ್ಜುನ ಕಂದಗಲ್, ಶಿವಾನಂದ, ವೀರೇಶ ತಾವರಗೇರಿ, ಶರಣಪ್ಪ ಎನ್ ಜೆ ಡಿ ಸೇರಿದಂತೆ ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

Don`t copy text!