ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಕರಕುಶಲ ವಸ್ತುಗಳ ಪ್ರದರ್ಶನ
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಅಗತ್ಯ
e-ಸುದ್ದಿ,  ಮಾನ್ವಿ:
‘ಶಿಕ್ಷಣದಿಂದ ಮಹಿಳೆಯರ ಸ್ವಾವಲಂಬನೆ ಹಾಗೂ ಆರ್ಥಿಕ ಸಬಲೀಕರಣ ಸಾಧ್ಯ ‘ ಎಂದು ಬೆಂಗಳೂರಿನ ಐಐಪಿಆರ್ ಸಂಸ್ಥೆಯ ಮಹಿಳಾ ಅಧ್ಯಯನ ವಿಭಾಗದ ಸಂಯೋಜಕ ಪ್ರಾಧ್ಯಾಪಕಿ ಡಾ.ಎಸ್.ಪಿ.ಶ್ರೀಮತಿ ಹೇಳಿದರು.
ಸೋಮವಾರ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಘಟಕ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ‘ಲಿಂಗತ್ವ ಸೂಕ್ಷ್ಮತೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮಹಿಳಾ ಘಟಕದ ಸಂಯೋಜಕಿ ಹಾಗೂ ಸಹಾಯಕ ಪ್ರಾಧ್ಯಾಪಕಿ ಶೋಭಾ ಸಿ.ಎಚ್ ಮಾತನಾಡಿ, ‘ ಮಹಿಳೆಯರ ಸರ್ವಾಂಗೀಣ ಪ್ರಗತಿಗೆ ಸಂಘಟಿತ ಪ್ರಯತ್ನ ಅಗತ್ಯ’ ಎಂದರು.
ಕಾಲೇಜಿನ ವಿದ್ಯಾರ್ಥಿನಿಯರಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಎರಡು ಉತ್ತಮ ಕಲಾಕೃತಿಗಳಿಗೆ ಪ್ರಶಸ್ತಿ ನೀಡಲಾಯಿತು.
ಪ್ರಾಂಶುಪಾಲೆ ಸುಮಿತ್ರಾ ಪ್ಯಾಟಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಜಿಲ್ಲಾ ಮಹಿಳಾ ಕಲ್ಯಾಣಾಧಿಕಾರಿ ಗಿರಿಜಾ, ತಾಲ್ಲೂಕು ಮಹಿಳಾ ಶಕ್ತಿ ಕೇಂದ್ರದ ಸಂಯೋಜಕಿ ವಿಜಯಲಕ್ಷ್ಮೀ, ವಿದ್ಯಾರ್ಥಿನಿಯರಾದ ಸರಸ್ವತಿ, ಮೋಹ್ಸಿನಾ, ಶಾಂತಾ, ಕಲ್ಪನಾ, ಗಿರಿಜಾ ಮತ್ತು ಶಿಲ್ಪಾ ಇದ್ದರು.

Don`t copy text!