ಅಂಬೇಡ್ಕರ್ ಭಾವ ಚಿತ್ರಕ್ಕೆ ಅಪಮಾನ: ದೂರು ಧಾಖಲು
e-ಸುದ್ದಿ, ಮಸ್ಕಿ
ಮಸ್ಕಿ ಕಾಂಗ್ರೆಸ್ ಕಚೇರಿಯಲ್ಲಿ ಪೂಜೆ ಕಾರ್ಯಕ್ರಮವೊಂದರಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಅಪಾಧನೆ ಮೇಲೆ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಸಂಜೆ ದೂರು ಧಾಖಲಾಗಿದೆ.
ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಕಾಂಗ್ರೆಸ್ ಪಕ್ಷದ ಮುಖಂಡ ಆರ್.ತಿಮ್ಮಯ್ಯ ನಾಯಕ ಹಾಗೂ ರಾಘವೇಂದ್ರ ನಾಯಕ ಎನ್ನುವವರ ಮೇಲೆ ದೂರು ಧಾಖಲಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಯಾವುದೋ ಪೂಜಾ ಕಾರ್ಯಕ್ರಮದ ವೇಳೆಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅವರ ಕಾಲಿನ ಹತ್ತಿರ ಇಟ್ಟು ಅಪಮಾನ ಮಾಡಿದ್ದಾರೆ. ಅಂಬೇಡ್ಕರ್ ಅವರ ಆರಾಧಕರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ಹಿಗಾಗಿ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಮಲ್ಲಪ್ಪ ಗೊನಾಳ ಎನ್ನುವವರು ದೂರು ಧಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಮಸ್ಕಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.