ಮಸ್ಕಿ : ಚುನಾವಣಾ ಅಕ್ರಮ ದೂರು ವಜಾಗೊಂಡಿರುವದರಿಂದ ಮಸ್ಕಿ ಕ್ಷೇತ್ರಕ್ಕೆ ಆದಷ್ಟು ಬೇಗನೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮುಖಂಡರ ಸಭೆ ಭಾಗವಹಿಸಿ ಮಾತನಾಡಿದರು.
ನನ್ನ ವಿರುದ್ಧ ದಾಖಲಾದ ಮೂಲ ದೂರನ್ನೇ ವಜಾ ಮಾಡಿದ್ದು ಅದರ ವಿರುದ್ದ ಸುಪ್ರಿಂ ಕೊರ್ಟಗೆ ಹೋಗುವ ಸಾಧ್ಯತೆ ಕಡಿಮೆ ಇದೆ.
ಮಸ್ಕಿ, ಬಸವಕಲ್ಯಾಣ ವಿಧಾನಸಭೆಗೆ ಹಾಗು ಬೆಳಗಾವಿ ಲೋಕಸಭೆಗೆ ಚುನಾವಣೆ ನಡೆಯುವ ನಿರೀಕ್ಷೆ ಇದೆ ಎಂದರು.
ಬಿಜೆಪಿ ಪಕ್ಷ ಶಿಸ್ತಿನ ಪಕ್ಷವಾಗಿದ್ದು ಕಾರ್ಯಕರ್ತರು ಯಾವುದೇ ಅಪ ಪ್ರಚಾರಗಳಿಗೆ ಕಿವಿಗೊಡದೆ , ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮನದಟ್ಟು ಮಾಡಲು ಮುಂದಾಗಬೇಕು ಎಂದು ಪ್ರತಾಪಗೌಡ ಪಾಟೀಲ ತಿಳಿಸಿದರು.
ಮಸ್ಕಿ ಕ್ಷೇತ್ರ ಹೊಸ ಕ್ಷೇತ್ರವಾದ ಮೇಲೆ ಮೂರು ಬಾರಿ ಗೆಲಿಸಿದ್ದೀರಿ. ಈ ಬಾರಿ ಮತ್ತೆ ಗೆದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವನಾಗಿ ಮಸ್ಕಿ ಕ್ಷೇತ್ರ ರಾಜ್ಯದಲ್ಲಿ ಮಾದರಿ ಕ್ಷೇತ್ರ ಮಾಡುವ ಅವಕಾಶವನ್ನು ಬಳಸಿಕೊಳ್ಳಲು ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ನಾನು ಸೇರಿದಂತೆ ಮುಖಂಡರು, ಕಾರ್ಯಕರ್ತರು ಶ್ರಮಿಸೋಣ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮನವಿ ಮಾಡಿದರು.
ವಿವಿಧ ಭಾಗಗಳಿಂದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.