e-ಸುದ್ದಿ, ಮಸ್ಕಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾ.20 ರಂದು ಮಸ್ಕಿ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯ ಹತ್ತಿರದ ಬಯಲು ಜಾಗದಲ್ಲಿ ಬಹಿರಂಗ ಸಭೆ ನಡೆಯುವ ಸ್ಥಳವನ್ನು ಗುರುವಾರ ವಿಕ್ಷೀಸಿ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕೊಪ್ಪಳದ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ರಾಜ್ಯ ಅಧ್ಯಕ್ಷ ನಳಿನಕುಮಾರ ಕಟೀಲು ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಮಾ.9 ರಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರ ಅಪಾರ ಬೆಂಬಲಿಗರು ಮಾ.20 ಶನಿವಾರ ಮಸ್ಕಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದರು.
ಮಾ.20 ಶನಿವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳ ಬಹಿರಂಗ ಸಭೆ ನಡೆಯಲಿದೆ. ಉಪ ಮುಖ್ಯಮಂತ್ರಿ ಹಾಗೂ ಲೋಕೊಪಯೋಗಿ ಇಲಾಖೆಯ ಸಚಿವ ಗೊವಿಂದ ಕಾರಜೋಳ, ಸಮಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮೂಲು, ಗ್ರಾಮೀಣಾಭಿವೃದ್ದಿ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ, ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಖಾತೆ ಲಕ್ಷ್ಮಣ ಸವದಿ ಭಾಗವಹಿಸಲಿದ್ದಾರೆ.
ಮಸ್ಕಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಬಹಿರಂಗ ಸಭೆ ಆಯೋಜಿಸಿದ್ದು ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಅಂದಾಜು 30 ಸಾವಿರ ಜನ ಆಗಮಿಸಲಿದ್ದು, ಕರೊನಾ ಹಾವಳಿ ಕಾರಣ ಆಗಮಿಸುವ ಸಾರ್ವಜನಿಕರಿಗೆ ಉಚಿತ ಮಾಸ್ಕ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಿಜೆಪಿ ಕಾರ್ಯಕರ್ತರು ಶಿಸ್ತಿನಿಂದ ವರ್ತಿಸುವಂತೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮನವಿ ಮಾಡಿದರು.
ಬಿಜೆಪಿ ಹಿರಿಯ ಮುಖಂಡ ಮಹಾದೇವಪ್ಪಗೌಡ ಪಾಟೀಲ, ಅಂದಾನಪ್ಪ ಗುಂಡಳ್ಳಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಮಾಜಿ ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ, ಬಿಜೆಪಿ ಯುವ ಮುಖಂಡರಾದ ಬಸನಗೌಡ ಪಾಟೀಲ, ರವಿಗೌಡ, ಚೇತನ್ ಪಾಟೀಲ, ಬಿಜೆಪಿ ಮಂಡಲ ಕಾರ್ಯದರ್ಶಿ ಶರಣಯ್ಯ ಸೊಪ್ಪಿಮಠ, ಮಸ್ಕಿ ಶಕ್ತಿಕೇಂದ್ರದ ಅಧ್ಯಕ್ಷ ನಾಗರಾಜ ಯಂಬಲದ, ಸೂಗಣ್ಣ ಬಾಳೆಕಾಯಿ, ಅಮರೇಶ ನಾಯಕ, ವೆಂಕಟೇಶ ನಾಯಕ ಹಾಗೂ ಇತರರು ಇದ್ದರು.