e-ಸುದ್ದಿ, ಮಸ್ಕಿ
ಬಿಜೆಪಿ ಮುಖಂಡರು ಕೊವೀಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದು ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಕರ್ನಾಟಕ ರಾಷ್ಟ್ರೀಯ ಸಮಿತಿ (ಕೆಆರ್‍ಎಸ್) ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಕೊವೀಡ್ 19 ನಿಯಮಾವಳಿ ಪ್ರಕಾರ ಸಾರ್ವಜನಿಕ ಸಮಾರಂಭದಲ್ಲಿ 500 ಜನಕ್ಕಿಂತ ಹೆಚ್ಚಿನ ಜನರನ್ನು ಸೇರಿಸಲು ಅವಕಾಶವಿಲ್ಲ. ಆದರೆ ಮಸ್ಕಿ ಪಟ್ಟಣದಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಶಾ¸ಕ ಪ್ರತಾಪಗೌಡÀ 30 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿರುವದು ಸರ್ಕಾರದ ನಿಯಮಾವಳಿ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಬಿ.ಶ್ರೀರಾಮುಲು, ಕೆ.ಎಸ್.ಈಶ್ವರಪ್ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಆಗಮಿಸುತ್ತಿರುವಞ ಸಮಾರಂಭಕ್ಕೆ ಲಕ್ಷಾಂತರ ರೂ.ವೆಚ್ಚ ಮಾಡುತ್ತಿದ್ದು, ಮಸ್ಕಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಂದ ಜನರನ್ನು ಕರೆತರುತ್ತಿರುವದು ಸರ್ಕಾರ ನೀತಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳನ್ನು ಹೊಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಚುನಾವಣ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.