ಸುದ್ದಿ, ಮಸ್ಕಿ
ಮಸ್ಕಿ ಉಪ ಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಹಾಗೂ ಮತ ಪೆಟ್ಟಿಗೆ ಸಂಗ್ರಹಿಸಿಡುವ ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿರುವ ಭದ್ರತಾ ಕೊಠಡಿಯನ್ನು ಎಸ್.ಪಿ. ಪ್ರಕಾಶ ನಿಕ್ಕಿಂ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಣ್ನು ಗುರುತಿಸಲಾಗಿದ್ದು ಅಂತಹ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗುವದು ಎಂದು ಸುದ್ದಿಗಾರರಿಗೆ ಎಸ್ಪಿ ಪ್ರಕಾಶ ನಿಕ್ಕಿಂ ಹೇಳಿದರು.
ಮತದಾನಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಕ್ರಮಗೈಗೊಳ್ಳಲಾಗುತ್ತದೆ. ಶಾಂತಿ ಸುವ್ಯವಸ್ಥೆಯಿಂದ ಮತದಾನ ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದ ಜಿಲ್ಲೆಯ ಒಳಗಡೆ ಬರುವ ವಾಹನಗಳ ಮೇಲೆ ನಿಗಾ ಇಡಲಾಗಿದೆ ಎಂದರು.
ಡಿವೈಎಸ್‍ಪಿ ಎಸ್.ಹುಲ್ಲೂರು, ವಿಶ್ವನಾಥ ಕುಲಕರ್ಣಿ, ಸಿಪಿಐ ದೀಪಕ್ ಬೂಸರಡ್ಡಿ ಹಾಗೂ ಇತರರು ಇದ್ದರು.