ಚರುಕುಗೊಂಡ ಉಪ ಚುನಾವಣೆ
ಮಸ್ಕಿ : ಪ್ರತಾಪಗೌಡ, ಆರ್. ಬಸನಗೌಡ ನಾಮಪತ್ರ ಸಲ್ಲಿಕೆ
e-ಸುದ್ದಿ, ಮಸ್ಕಿ
ಮಸ್ಕಿ : ಏಪ್ರಿಲ್ 17 ರಂದು ನಡೆಯಲಿರುವ ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಸೋಮವಾರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಬೆಳಿಗ್ಗೆ 11 ಗಂಟೆಗೆ ಬಸವೇಶ್ವರ ನಗರದ ಗಣೇಶ ದೇವಸ್ಥಾನ ಹಾಗೂ ಭ್ರಮರಾಂಬಾ ಮಲ್ಲಿಕಾರ್ಜುನ ದೇವಸಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ ನಂತರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಜೊತೆಗೂಡಿ ಚುನಾವಣಾಧಿಕಾರಿ ರಾಜಶೇಖರ ಡಂಬಳ ಅವರಿಗೆ ನಾಮಪತ್ರ ಸಲ್ಲಿಸಿದರು.
ಆರ್. ಬಸನಗೌಡ ನಾಮಪತ್ರ ಸಲ್ಲಿಕೆ : ಬೆಳಿಗ್ಗೆ ವಿವಿಧ ಧಾರ್ಮಿಕ ಸ್ಥಳಗಳಿಗೆ ಬೇಟಿ ನೀಡಿದ ಆರ್. ಬಸನಗೌಡ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಜೊತೆಗೂಡಿ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಹೊರ ಬರುತ್ತಿದ್ದಂತೆ ಎರಡು ಪಕ್ಷಗಳ ಹಿಂಬಾಲಕರು ಹಾಗೂ ನೂರಾರು ಕಾರ್ಯಕರ್ತರು ಜಯಘೋಷ ಹಾಕಿ ಸಂಭ್ರಮಿಸಿದರು.
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಮುಖ್ಯ ಬಜಾರದ ರಸ್ತೆ ಟ್ರಾಪಿಕ್ ಜಾಮ್ ಆಗಿ ಸಾರ್ವಜನಿಕರು ಪರದಾಡುವಂತಾಯಿತು.
ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುವಂತಾಯಿತು